LATEST NEWS
ಬಿಪೊರ್‌ಜಾಯ್ ಚಂಡಮಾರುತದ ಅಬ್ಬರ – ಕರಾವಳಿಯಲ್ಲಿ ಭಾರೀ ಮಳೆ ಸಾಧ್ಯತೆ

ಮಂಗಳೂರು ಜೂನ್ 09: ಬಿಪರ್ಜಾಯ್ ಚಂಡಮಾರುತವು ಅರಬ್ಬಿ ಸಮುದ್ರದಲ್ಲಿ ತೀವ್ರ ಸ್ವರೂಪ ಪಡೆದಿದೆ, ಈ ಹಿನ್ನಲೆ ಕರಾವಳಿ ಸೇರಿದಂತೆ ರಾಜ್ಯದಲ್ಲಿ ಮುಂದಿನ 3-4 ದಿನಗಳಲ್ಲಿ ಭಾರಿ ಮಳೆ ಸುರಿಯುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.
ಕರ್ನಾಟಕದ ಕರಾವಳಿ, ಗೋವಾ, ಕೇರಳ, ಲಕ್ಷದ್ವೀಪ, ತಮಿಳುನಾಡು, ಆಂಧ್ರಪ್ರದೇಶ, ರಾಜಸ್ಥಾನ, ಅಸ್ಸಾಂ, ಮಿಜೋರಾಂ, ಮಣಿಪುರ, ಅರಿಣಾಚಲಪ್ರದೇಶ, ಮೇಘಾಲಯದಲ್ಲೂ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ, ತುಮಕೂರಿನಲ್ಲಿ ಭಾರಿ ಮಳೆಯಾಗಲಿದೆ, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಕರಾವಳಿಯಲ್ಲಿ ಬಿರುಗಾಳಿಯು ಗಂಟೆಗೆ 40–45 ಕಿ.ಮೀ. ಇಂದ, 55 ಕಿ.ಮೀ. ವೇಗದಲ್ಲಿ ಶುಕ್ರವಾರ ಬೀಸುವ ಸಾಧ್ಯತೆಯಿದೆ. ಆದ್ದರಿಂದ ಮೀನುಗಾರರು ಸಮುದ್ರಕ್ಕೆ ಇಳಿಯಬಾರದು ಎಂದು ಮುನ್ನೆಚ್ಚರಿಕೆ ನೀಡಿದೆ. ಕರಾವಳಿಯ ಹಲವೆಡೆ ಹಾಗೂ ಒಳನಾಡಿನ ಕೆಲವೆಡೆ ಶುಕ್ರವಾರ ಗುಡುಗು ಸಹಿತ ಮಳೆಯಾಗಲಿದೆ. ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಮಳೆಯ ತೀವ್ರತೆ ಹೆಚ್ಚಲಿದೆ. ಕೆಲವೆಡೆ ಬಿರುಗಾಳಿ ಸಹಿತ ಮಳೆ ಸುರಿಯಲಿದೆ. ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ ಇರಲಿದ್ದು, ಸಂಜೆ ಅಥವಾ ರಾತ್ರಿಯ ಅವಧಿಯಲ್ಲಿ ಗುಡುಗು ಸಹಿತ ಮಳೆಯಾಗಲಿದೆ ಎಂದು ತಿಳಿಸಿದೆ.