Connect with us

    LATEST NEWS

    100 ಕಿಲೋ ಮೀಟರ್ ವೇಗದಲ್ಲಿ ಓಡಿಶಾಕ್ಕೆ ಅಪ್ಪಳಿಸಲಿದೆ ಡಾನಾ ಚಂಡಮಾರುತ

    ಓಡಿಶಾ ಅಕ್ಟೋಬರ್ 22: ಬಂಗಾಳ ಕೊಲ್ಲಿಯಲ್ಲಿ ಎದ್ದಿರುವ ಡಾನಾ ಚಂಡಮಾರುತ ಇದೀಗ ಓಡಿಶಾ ಹಾಗೂ ಪಶ್ಚಿಮ ಬಂಗಾಳ ಕ್ಕೆ ಅಪ್ಪಳಿಸಲಿದೆ ಎಂದು ಹವಮಾನ ಇಲಾಖೆ ತಿಳಿಸಿದೆ.


    ಪೂರ್ವ– ಮಧ್ಯ ಬಂಗಾಳಕೊಲ್ಲಿ ಹಾಗೂ ಅಂಡಮಾನ್ ಸಮುದ್ರದ ಉತ್ತರಕ್ಕೆ ವಾಯುಭಾರ ಕುಸಿತ ಉಂಟಾಗಿದೆ. ಬುಧವಾರದ ವೇಳೆಗೆ ಅದು ಚಂಡಮಾರುತವಾಗಿ ಪರಿವರ್ತನೆಯಾಗಲಿದೆ. ಅಕ್ಟೋಬರ್ 24 ರ ವೇಳೆಗೆ ಇದು ತೀವ್ರ ಚಂಡಮಾರುತವಾಗಿ ತೀವ್ರಗೊಂಡು ಉತ್ತರ ಬಂಗಾಳ ಕೊಲ್ಲಿಯ ತೀರ ಪ್ರದೇಶವನ್ನು ಅಪ್ಪಳಿಸಲಿದೆ.

    ವಾಯುವ್ಯ ದಿಕ್ಕಿಗೆ ಚಲಿಸಲಿರುವ ಈ ಚಂಡಮಾರುತ ಗುರುವಾರ ರಾತ್ರಿ ಅಥವಾ ಶುಕ್ರವಾರ ಮುಂಜಾನೆ ಒಡಿಶಾದ ಪುರಿಗೆ ಅಪ್ಪಳಿಸಲಿದೆ. ಈ ವೇಳೆ ಗಾಳಿಯ ವೇಗ ಗಂಟೆಗೆ 100 ರಿಂದ 120 ಕಿಲೋಮೀಟರ್‌ಗಳವರೆಗೆ ಇರುವ ಸಾಧ್ಯತೆಯಿದೆ. ಈ ಹಿನ್ನೆಲೆಯಲ್ಲಿ ಮಂಗಳವಾರ ಸಂಜೆಯೊಳಗೆ ದಡ ಸೇರುವಂತೆ ಮೀನುಗಾರರಿಗೆ ಸೂಚಿಸಲಾಗಿದೆ.

    ಸಂಭಾವ್ಯ ತುರ್ತು ಪರಿಸ್ಥಿತಿಗಳನ್ನು ನಿಭಾಯಿಸಲು ಒಟ್ಟು 14 NDRF ತಂಡಗಳನ್ನು ಪಶ್ಚಿಮ ಬಂಗಾಳದಲ್ಲಿ ಮತ್ತು 11 ಒಡಿಶಾದಲ್ಲಿ ನಿಯೋಜಿಸಲಾಗಿದೆ. ಕ್ಯಾಬಿನೆಟ್ ಕಾರ್ಯದರ್ಶಿ ಟಿವಿ ಸೋಮನಾಥನ್ ಅವರು ಆಸ್ತಿ, ಪಾಸ್ತಿ ನಷ್ಟವನ್ನು ಕಡಿಮೆ ಮಾಡಲು ಎಲ್ಲಾ ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳುವಂತೆ ಎರಡೂ ರಾಜ್ಯ ಸರ್ಕಾರಗಳಿಗೆ ಸೂಚಿಸಿದ್ದಾರೆ.

    Share Information
    Advertisement
    Click to comment

    Leave a Reply

    Your email address will not be published. Required fields are marked *