ಅರಬ್ಬೀ ಸಮುದ್ರದಲ್ಲಿ ಚಂಡಮಾರುತ ನಿರ್ಮಾಣ ಸಮುದ್ರಕ್ಕೀಳಿಯದಂತೆ ಹವಮಾನ ಇಲಾಖೆ ಎಚ್ಚರಿಕೆ

ಮಂಗಳೂರು ಜೂನ್ 9: ಅರಬ್ಬೀ ಸಮದ್ರದ ಮಧ್ಯಭಾಗದಿಂದ ನೈಋುತ್ಯ ಲಕ್ಷದ್ವೀಪ ಭಾಗದಲ್ಲಿ ಕಡಿಮೆ ಒತ್ತಡ ಪ್ರದೇಶ ನಿರ್ಮಾಣವಾಗಿದ್ದು ಮುಂದಿನ 48 ಗಂಟೆಗಳಲ್ಲಿ ಇಂದು ಚಂಡಮಾರುತವಾಗಿ ಪರಿವರ್ತನೆ ಆಗಲಿದೆ ಎಂದು ಹವಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಮುಂದಿನ 24 ಗಂಟೆಗಳಲ್ಲಿ ಕೇರಳ ಹಾಗೂ ಕರ್ನಾಟಕ ಕರಾವಳಿ ಪ್ರದೇಶಗಳಲ್ಲಿ ಭಾರಿ ಗಾಳಿ ಸಹಿತ ಮಳೆ ಬೀಳುವ ಸಾಧ್ಯತೆ ಇದೆ ಎಂದು ಹವಾಮನ ಇಲಾಖೆ ಮುನ್ಸೂಚನೆ ನೀಡಿದ್ದು, ಸಮುದ್ರ ತೀರದಲ್ಲಿ ಗಾಳಿಯ ರಭಸ 35 -45 kmh ರಷ್ಟು ಇರಲಿದೆ ಎಂದು ತಿಳಿಸಿದೆ. ಈ ಹಿನ್ನಲೆಯಲ್ಲಿ ಸಮುದ್ರ ತೀರದಲ್ಲಿ ಭಾರಿ ಗಾತ್ರದ ಅಲೆಗಳು ಎಳಲಿದ್ದು, ಮೀನುಗಾರರಿಗೆ ಸಮುದ್ರಕ್ಕೆ ತೇರಳದಂತೆ ಎಚ್ಚರಿಕೆ ನೀಡಿದೆ.

ಈಗಾಗಲೇ ಕರಾವಳಿಯಲ್ಲಿ ಮಧ್ಯಾಹ್ನದಿಂದ ಭಾರಿ ಗಾಳಿ ಬೀಸುತ್ತಿದೆ. ಕೇರಳಕ್ಕೆ ಜೂನ್ 8 ರಂದು ಮುಂಗಾರು ಮಳೆ ಪ್ರವೇಶವಾಗಿದ್ದು, ಕೇರಳದಾದ್ಯಂತ ಭಾರಿ ಮಳೆ ಸುರಿಯುತ್ತಿದೆ. ಈ ನಡುವೆ ಅರಬ್ಬೀ ಸಮುದ್ರದಲ್ಲಿ ಚಂಡಮಾರುತ ಸೃಷ್ಠಿಯಾಗಿರುವ ಹಿನ್ನಲೆಯಲ್ಲಿ ಕರಾವಳಿಯಲ್ಲಿ ಭಾರಿ ಮಳೆ ಸುರಿಯುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.

Facebook Comments

comments