LATEST NEWS
ಮಧುರೈ ರೈಲಿನಲ್ಲಿ ಸಿಲಿಂಡರ್ ಸ್ಪೋಟ: 8 ಮಂದಿ ಸಾವು, ಹಲವರಿಗೆ ಗಾಯ

ಮಧುರೈ, ಆಗಸ್ಟ್ 26: ಮಧುರೈ ರೈಲು ನಿಲ್ದಾಣದಲ್ಲಿ ನಿಲ್ಲಿಸಲಾಗಿದ್ದ ರೈಲಿನಲ್ಲಿ ಹಠಾತ್ ಬೆಂಕಿ ಕಾಣಿಸಿಕೊಂಡಿದೆ. ಲಕ್ನೋ-ರಾಮೇಶ್ವರಂ ಟೂರಿಸ್ಟ್ ರೈಲಿನಲ್ಲಿ ಈ ಅವಘಡ ನಡೆದಿದ್ದು, ಎಂಟು ಮಂದಿ ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ.
ಪ್ರಾಥಮಿಕ ತನಿಖೆಯ ಪ್ರಕಾರ, ರೈಲಿನಲ್ಲಿದ್ದ ಪ್ರಯಾಣಿಕರು ಸಿಲಿಂಡರ್ ಬಳಸಿ ಅಡುಗೆ ಮಾಡುತ್ತಿದ್ದಾಗ ಗ್ಯಾಸ್ ಸೋರಿಕೆಯಾಗಿ ಸಿಲಿಂಡರ್ ಸ್ಪೋಟಗೊಂಡಿದೆ. ಈ ವೇಳೆ ಬೆಂಕಿ ಕಾಣಿಸಿಕೊಂಡಿದ್ದು, ಇಬ್ಬರು ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ. ಮಾಹಿತಿ ಪಡೆದ ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ದೌಡಾಯಿಸಿದ್ದು, ಬೆಂಕಿ ನಂದಿಸಲು ಹರಸಾಹಸ ಪಡುತ್ತಿದ್ದಾರೆ.

ಮೃತರನ್ನು ಉತ್ತರ ಪ್ರದೇಶದವರು ಎಂದು ಗುರುತಿಸಲಾಗಿದೆ. ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಇನ್ನೂ ಹೆಚ್ಚಿನ ಮಾಹಿತಿಗಾಗಿ ನಿರೀಕ್ಷಿಸಲಾಗುತ್ತಿದೆ.