ಮಣಿಪಾಲ ನವೆಂಬರ್ 27: ಗ್ಯಾಸ್ ಸಿಲಿಂಡರ್ ಗೆ ಆಕಸ್ಮಿಕ ಬೆಂಕಿ ತಗುಲಿದ ಪರಿಣಾಮ ಸ್ಪೋಟಗೊಂಡು ಹೊಟೇಲ್ ಒಂದು ಸಂಪೂರ್ಣ ಭಸ್ಮವಾದ ಘಟನೆ ಮಣಿಪಾಲ ಆರ್‌ಎಸ್‌ಬಿ ಸಭಾಭವನದ ಸಮೀಪ ಸಂಭವಿಸಿದೆ.


ಡೆಲ್ಲಿ ಡಾಬಾ ಎಂಬ ಹೊಟೇಲಿನ ಒಂದು ಗ್ಯಾಸ್ ಸಿಲಿಂಡರ್ ಅಕಸ್ಮಿಕವಾಗಿ ಸ್ಪೋಟಗೊಂಡಿತ್ತೆನ್ನಲಾಗಿದೆ. ಇದರಿಂದ ಹೊಟೇಲ್‌ನಲ್ಲಿ ಬೆಂಕಿ ಕಾಣಿಸಿ ಕೊಂಡಿದ್ದು, ಕ್ಷಣ ಮಾತ್ರದಲ್ಲೇ ಬೆಂಕಿ ಕೆನ್ನಾಲಿಗೆ ಇಡೀ ಹೊಟೇಲ್ ವಿಸ್ತರಿಸಿತು.


ಕೂಡಲೇ ಅಗ್ನಿಶಾಮಕ ದಳದವರಿಗೆ ಮಾಹಿತಿ ನೀಡಿದ್ದು, ಸ್ಥಳಕ್ಕೆ ಆಗಮಿಸಿದ ಉಡುಪಿ ಅಗ್ನಿಶಾಮಕದಳದವರು ಬೆಂಕಿ ನಂದಿಸುವಲ್ಲಿ ಯಶಸ್ವಿಯಾದರು. ಅಲ್ಲದೇ ಇನ್ನೆರೆಡು ಗ್ಯಾಸ್ ಸಿಲಿಂಡರ್‌ಗಳು ಸ್ಪೋಟಗೊಳ್ಳದಂತೆ ತಡೆದರು ಎಂದು ತಿಳಿದುಬಂದಿದೆ. ಇದರಿಂದ ಯಾವುದೇ ಜೀವ ಹಾನಿ ಆಗಿಲ್ಲ ಎಂದು ತಿಳಿದುಬಂದಿದೆ.

ದೆಹಲಿ ಧಾಬಾ ರೆಸ್ಟೋರೆಂಟ್ ಒಳಗೆ ಶಾರ್ಟ್ ಸರ್ಕ್ಯೂಟ್ ನಿಂದ ಈ ಘಟನೆ ಸಂಭವಿಸಿದೆ ಎಂದು ಉಡುಪಿ ಎಸ್ಪಿ ಹರಿರಾಮ್ ಶಂಕರ್ ಸ್ಪಷ್ಟಪಡಿಸಿದ್ದಾರೆ ಮತ್ತು ಅಗ್ನಿಶಾಮಕ ಇಲಾಖೆ ಮತ್ತು ಪೊಲೀಸರು ಇಬ್ಬರೂ ಸ್ಥಳವನ್ನು ಪರಿಶೀಲಿಸಿದ್ದಾರೆ ಎಂದು ದೃಢಪಡಿಸಿದ್ದಾರೆ. “ಯಾವುದೇ ಅನುಮಾನವಿಲ್ಲ. ಯಾವುದೇ ವದಂತಿಗಳು ಹರಡದಂತೆ ನಾನು ಈ ಸ್ಪಷ್ಟೀಕರಣವನ್ನು ನೀಡುತ್ತಿದ್ದೇನೆ. ಯಾರಿಗೂ ಗಾಯಗಳಾಗಿಲ್ಲ” ಎಂದು ಅವರು ಹೇಳಿದರು.

Share Information