DAKSHINA KANNADA
ಸಾಲ್ಮರ ಕೂಲಿಕಾರ್ಮಿಕನ ಶ*ವ ರಸ್ತೆಯಲ್ಲಿ ಎಸೆದ ಪ್ರಕರಣ – ಓರ್ವ ಆರೋಪಿ ಅರೆಸ್ಟ್
ಪುತ್ತೂರು ನವೆಂಬರ್ 19: ಮೃತಪಟ್ಟ ಕೂಲಿ ಕಾರ್ಮಿಕನ ಮೃತದೇಹವನ್ನು ರಸ್ತೆಯಲ್ಲಿ ಎಸೆದು ಹೋದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರ ಮೇಲೆ ಪ್ರಕರಣ ದಾಖಲಾಗಿದ್ದು. ಅದರಲ್ಲಿ ಓರ್ವ ಆರೋಪಿಯನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ.
ಬಂಧಿತನನ್ನು ಪ್ರಾಸ್ಸಿನ್ಸ್ ಎಂದು ಗುರುತಿಸಲಾಗಿದೆ. ಸಾಲ್ಮರದ ವುಡ್ ಇಂಡಸ್ಟ್ರೀಸ್‌ನಲ್ಲಿ ಮರದ ಕೆಲಸದ ಮೇಸ್ತ್ರಿ ಸಹಾಯಕರಾಗಿ ಕೆಲಸ ಮಾಡುತ್ತಿದ್ದ ಕೂಲಿ ಶಿವಪ್ಪ ಅವರನ್ನು ಕೂಲಿ ಕೆಲಸಕ್ಕೆಂದು ಹೆನ್ರಿ ತಾಪ್ರೊ ಕರೆದುಕೊಂಡು ಹೋಗಿದ್ದರು. ಮಧ್ಯಾಹ್ನದ ಹೆನ್ರಿ ತಾವೊ ಮತ್ತು ಮೇಸ್ತ್ರಿ ಸ್ಪ್ಯಾನಿ ಹಾಗೂ ಇನ್ನೊಬ್ಬರು ಅದೇ ಪಿಕಪ್ ವಾಹನದಲ್ಲಿ ಮರದ ದಿಮ್ಮಿಗಳ ಮೇಲೆ ಮಲಗಿಸಿಕೊಂಡು ಬಂದು ಶಿವಪ್ಪ ಅವರ ಮನೆಯ ಬಳಿಯ ರಸ್ತೆ ಬದಿಯಲ್ಲಿ ಬಿಟ್ಟು ಹೋಗಿದ್ದರು. ತಕ್ಷಣ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿದ್ದು, ಆ ವೇಳೆಗಾಗಲೇ ಅವರು ಮೃತಪಟ್ಟಿರುವುದನ್ನು ವೈದ್ಯರು ದೃಢಪಡಿಸಿದ್ದರು.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ದಲಿತ ಸಂಘಟನೆಗಳು ಪ್ರತಿಭಟನೆ ನಡೆಸಿದ ಬೆನ್ನಲ್ಲೇ ಮೂವರ ಮೇಲೆ ಪ್ರಕರಣ ದಾಖಲಾಗಿತ್ತು, ಆದರೆ ಮೂವರು ಪರಾರಿಯಾಗಿದ್ದರು, ಇದೀಗ ಓರ್ವ ಆರೋಪಿ ಅರೆಸ್ಟ್ ಆಗಿದ್ದಾರೆ. ಪ್ರಮುಖ ಆರೋಪಿ ತಾವ್ರೋ ಇಂಡಸ್ಟ್ರೀಸ್ ನ ಹೆನ್ರಿ ತಾವ್ರೋ ತಲೆ ಮರೆಸಿಕೊಂಡಿದ್ದಾರೆ. ಇನ್ನು ಪ್ರಮುಖ ಆರೋಪಿಯನ್ನು ಬಂಧಿಸದೇ ಹೋದಲ್ಲಿ ಪ್ರತಿಭಟನೆಯ ಎಚ್ಚರಿಕೆಯನ್ನು ದಲಿತ ಸಂಘಟನೆಗಳು ನೀಡಿದೆ.