LATEST NEWS
ಭಾರತದಿಂದ ದುಬೈಗೆ 2.60 ಕೋಟಿ ಮೌಲ್ಯದ ವಜ್ರ ಅಕ್ರಮ ಸಾಗಾಟ

ಮಂಗಳೂರು ಫೆಬ್ರವರಿ 13: ಚಿನ್ನ ಅಕ್ರಮ ಸಾಗಾಟದ ಬಳಿಕ ಇದೀಗ ಮಂಗಳೂರು ವಿಮಾನ ನಿಲ್ದಾಣದಲ್ಲಿ ಅಕ್ರಮವಾಗಿ ವಜ್ರ ಸಾಗಾಟಕ್ಕೆ ಯತ್ನಿಸಿದ್ದ ಸ್ಮಗ್ಲರ್ ಗಳನ್ನು ಭಾರತೀಯ ಕಂದಾಯ ಗುಪ್ತಚರ ನಿರ್ದೇಶನಾಲಯ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.
ದುಬೈಗೆ ಪ್ರಯಾಣ ಬೆಳೆಸಿದ್ದ ಭಟ್ಕಳದ ಅನಸ್ ಮತ್ತು ಅಮ್ಮರ್ ಎಂಬಿಬ್ಬರು ಪ್ರಯಾಣಿಕರು ತಮ್ಮ ಶೂ ಮತ್ತು ಬ್ಯಾಗ್ ಅಡಿಯಲ್ಲಿ ಅನುಮಾನ ಬಾರದಂತೆ ವಜ್ರವನ್ನು ಅಡಗಿಸಿಟ್ಟು ಸಾಗಾಟ ಮಾಡುತ್ತಿದ್ದರು. ಮಾಹಿತಿ ಮೇರೆಗೆ ಇಬ್ಬರು ಪ್ರಯಾಣಿಕರ ಪರಿಶೀಲನೆ ನಡೆಸಿದ ಸಂದರ್ಭ ಆರೋಪಿಗಳ ಭಾರತದಿಂದ ದುಬೈಗೆ ಅಕ್ರಮವಾಗಿ ವಿಮಾನದಲ್ಲಿ 2.60 ಕೋಟಿ ರೂ. ಮೌಲ್ಯದ ವಜ್ರ ಸಾಗಿಸಲು ಯತ್ನಿಸಿದ್ದಾರೆ. ಆರೋಪಿಗಳು ಈ ವಜ್ರಗಳನ್ನು ಮುಂಬಯಿಯಿಂದ ತಂದಿದ್ದರು ಎನ್ನಲಾಗಿದೆ
