DAKSHINA KANNADA
ನಳಿನ್ ಕುಮಾರ್ ಕಟೀಲ್ ಟಿಕೆಟ್ ಮಿಸ್ – ವಾರಗಳ ಹಿಂದೆಯೇ ಎಚ್ಚರಿಕೆ ನೀಡಿದ್ದ ವಿಷ್ಣುಮೂರ್ತಿ ದೈವ

ಪುತ್ತೂರು ಮಾರ್ಚ್ 14: ಸಂಸದ ನಳಿನ್ ಕುಮಾರ್ ಕಟೀಲ್ ಅವರಿಗೆ ಲೋಕಸಭೆ ಚುನಾವಣೆಯ ಟಿಕೆಟ್ ಈ ಬಾರಿ ಕೈ ತಪ್ಪಿದೆ. ಈ ನಡುವೆ ಈ ಬಗ್ಗೆ ದೈವವೊಂದು ನಳಿನ್ ಅವರಿಗೆ ವಾರಗಳ ಹಿಂದೆಯೇ ನೀಡಿದ್ದ ಎಚ್ಚರಿಕೆಯ ವಿಡಿಯೋ ಇದೀಗ ವೈರಲ್ ಆಗಿದೆ.
ದಕ್ಷಿಣಕನ್ನಡ ಜಿಲ್ಲೆಯಲ್ಲಿ ಮೂರು ಬಾರಿ ಸಂಸದರಾಗಿದ್ದ ನಳಿನ್ ಕುಮಾರ್ ಕಟೀಲ್ ಅವರಿಗೆ ಬಿಜೆಪಿ ಈ ಬಾರಿ ಟಿಕೆಟ್ ನಿರಾಕರಿಸಿದೆ. ಈ ನಡುವೆ ದೈವವೊಂದು ನಳಿನ್ ಅವರಿಗೆ ಈ ಕುರಿತಂತೆ ಎಚ್ಚರಿಸಿದ ವಿಡಿಯೋ ಇದೀಗ ವೈರಲ್ ಆಗಿದೆ.

ದ.ಕ. ಜಿಲ್ಲೆಯ ಸುಳ್ಯ ತಾಲೂಕಿನ ಅಜ್ಜಾವರ ಗ್ರಾಮದ ಮೇನಾಲದಲ್ಲಿ ನಡೆದಿದ್ದ ವಯನಾಟ್ ಕುಲವನ್ ದೈವದ ನೇಮೋತ್ಸವದಲ್ಲಿ ವಿಷ್ಣುಮೂರ್ತಿ ದೈವ ನಳಿನ್ ಗೆ ಎಚ್ಚರಿಕೆ ನೀಡಿತ್ತು. ನಿನಗೆ ವೈರಿಗಳು ತುಂಬಾನೇ ಇದ್ದಾರೆ, ದಯಾದಿಗಳೇ ಪರಸ್ಪರ ವೈರಿಗಳಾಗಿ ಕುರುಕ್ಷೇತ್ರ ಯುದ್ಧ ನಡೆಯಲಿಲ್ಲವೇ. ಅಂದು ಪಾರ್ಥನಿಗೂ ಧರ್ಮ ಕಾಪಾಡುವಂತೆ ನಾನು ಸಲಹೆ ನೀಡಿದ್ದೆ. ವೈರಿಗಳು ಎಷ್ಟಿದ್ದರೇನು ಕೊನೆಗೆ ಸತ್ಯ, ಧರ್ಮ ಮಾತ್ರ ಗೆಲ್ಲುವುದು. ಯಾವುದಕ್ಕೂ ಕುಗ್ಗಬೇಡ ಎಂದಿರುವ ದೈವ, ನೀನು ಹಿಂದುರುಗಿ ನೋಡಬೇಡ, ನಿನಗೆ ಮುಂದೊಂದು ದಿನ ಜಯವಿದೆ ಎಂದು ವಿಷ್ಣುಮೂರ್ತಿ ದೈವ ಸಂಸದ ನಳಿನ್ ಗೆ ಅಭಯ ನೀಡಿದೆ.