ಮೂಡುಬಿದಿರೆ ಎಪ್ರಿಲ್ 09: ರಾಜ್ಯಾದ್ಯಂತ ಭಾರೀ ಕುತೂಹಲ ಮೂಡಿಸಿದ್ದ 2026ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶ ಪ್ರಕಟವಾಗಿದ್ದು, ದಕ್ಷಿಣ ಕನ್ನಡ ಜಿಲ್ಲೆಯ ಮೂಡುಬಿದಿರೆಯ ಆಳ್ವಾಸ್ ಪಿಯು ಕಾಲೇಜು ರಾಜ್ಯಮಟ್ಟದಲ್ಲಿ ಅಭೂತಪೂರ್ವ ಸಾಧನೆ ಮಾಡಿದೆ. ಕಾಲೇಜಿನ ವಿದ್ಯಾರ್ಥಿನಿ ದಿಶಾ ಅವರು ವಾಣಿಜ್ಯ ವಿಭಾಗದಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ ಅಲಂಕರಿಸುವ ಮೂಲಕ ಜಿಲ್ಲೆಯ ಕೀರ್ತಿ ಹೆಚ್ಚಿಸಿದ್ದಾರೆ.

ಮೂಡುಬಿದಿರೆ ಮೂಲದ ದಿಶಾ ಅವರು ವಾಣಿಜ್ಯ ವಿಭಾಗದ ಆರೂ ವಿಷಯಗಳಲ್ಲಿ ನೂರಕ್ಕೆ ನೂರು ಅಂಕಗಳನ್ನು ಪಡೆಯುವ ಮೂಲಕ 600ಕ್ಕೆ 600 ಅಂಕ ಗಳಿಸಿ ಅಪ್ರತಿಮ ದಾಖಲೆ ಬರೆದಿದ್ದಾರೆ. ಫಲಿತಾಂಶ ಪ್ರಕಟವಾಗುತ್ತಿದ್ದಂತೆಯೇ ಆಳ್ವಾಸ್ ಕ್ಯಾಂಪಸ್ನಲ್ಲಿ ಹಬ್ಬದ ವಾತಾವರಣ ನಿರ್ಮಾಣವಾಗಿದ್ದು, ವಿದ್ಯಾರ್ಥಿನಿಯ ಈ ಐತಿಹಾಸಿಕ ಸಾಧನೆಯನ್ನು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷರಾದ ಡಾ. ಎಂ. ಮೋಹನ್ ಆಳ್ವ ಅವರು ಶ್ಲಾಘಿಸಿ ಅಭಿನಂದಿಸಿದ್ದಾರೆ.