LATEST NEWS
ಹಿಂದೂ ಕಾರ್ಯಕರ್ತ ಸುಹಾಸ್ ಹತ್ಯೆ ಖಂಡಿಸಿ ಮೇ 2 ರಂದು ದಕ್ಷಿಣ ಕನ್ನಡ ಬಂದ್ ಗೆ ಕರೆ ಕೊಟ್ಟ ವಿಶ್ವಹಿಂದೂ ಪರಿಷತ್

ಮಂಗಳೂರು ಮೇ 02: ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಕೊಲೆ ಪ್ರಕರಣಕ್ಕೆ ಸಂಬಂದಿಸಿದಂತೆ ಹಿಂದೂ ಕಾರ್ಯಕರ್ತರಲ್ಲಿ ಭಾರಿ ಆಕ್ರೋಶಕ್ಕೆ ಕಾರಣವಾಗಿದ್ದು ಈ ಹಿನ್ನಲೆ ಹಿಂದೂ ಕಾರ್ಯಕರ್ತ ಸುಹಾಸ್ ಹತ್ಯೆ ಖಂಡಿಸಿ ಮೇ-2 ರಂದು ದಕ್ಷಿಣ ಕನ್ನಡ ಬಂದ್ ಗೆ ಕರೆ ಕೊಟ್ಟ ವಿಶ್ವಹಿಂದೂ ಪರಿಷತ್ ಕರೆ ಕೊಟ್ಟಿದೆ.
ಮಂಗಳೂರಿನ ಬಜ್ಪೆ ಕಿನ್ನಿಪದವು ಬಳಿ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿಯನ್ನು ತಲ್ವಾರ್ನಿಂದ ಕೊಚ್ಚಿ ಕೊಲೆ ಮಾಡಲಾಗಿದೆ. ರೌಡಿಶೀಟರ್ ಸುಹಾಸ್ ಶೆಟ್ಟಿಯು ಸುರತ್ಕಲ್ನ ಫಾಜಿಲ್ ಕೊಲೆ ಕೇಸ್ನ ಪ್ರಮುಖ ಆರೋಪಿಯಾಗಿದ್ದರು.

ಇನ್ನು ಸುಹಾಸ್ ಹತ್ಯೆ ವಿಷಯ ತಿಳಿಯುತ್ತಿದ್ದಂತೆಯೇ ಮಂಗಳೂರಿನ ಎ.ಜೆ.ಆಸ್ಪತ್ರೆಗೆ ಮಂಗಳೂರು ದಕ್ಷಿಣ ಬಿಜೆಪಿ ಶಾಸಕ ವೇದವ್ಯಾಸ ಕಾಮತ್ ಆಗಮಿಸಿದ್ದಾರೆ. ಇನ್ನು ಆಸ್ಪತ್ರೆ ಎದುರು ಭಾರೀ ಸಂಖ್ಯೆಯಲ್ಲಿ ಹಿಂದೂ ಕಾರ್ಯಕರ್ತರು ಸೇರಿದ್ದಾರೆ. ಇದರಿಂದ ಮುನ್ನೆಚ್ಚರಿಕಾ ಕ್ರಮವಾಗಿ ಆಸ್ಪತ್ರೆ ಎದುರು ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ.