LATEST NEWS
ದಕ್ಷಿಣಕನ್ನಡದ ನೂತನ ಜಿಲ್ಲಾಧಿಕಾರಿ ಶಶಿಕಾಂತ್ ಸೆಂಥಿಲ್

ದಕ್ಷಿಣಕನ್ನಡದ ನೂತನ ಜಿಲ್ಲಾಧಿಕಾರಿ ಶಶಿಕಾಂತ್ ಸೆಂಥಿಲ್
ಮಂಗಳೂರು ಅಕ್ಟೋಬರ್ 10:- ದಕ್ಷಿಣ ಕನ್ನಡ ಜಿಲ್ಲೆಯ ಜಿಲ್ಲಾಧಿಕಾರಿ ಡಾ ಕೆ ಜಿ ಜಗದೀಶ್ ಅವರನ್ನು ವರ್ಗಾಯಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ದ.ಕ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ನಿರ್ದೇಶಕರಾಗಿದ್ದ ಶಶಿಕಾಂತ್ ಸೆಂಥಿಲ್ ಅವರನ್ನು ರಾಜ್ಯ ಸರಕಾರ ನೇಮಿಸಿದೆ.
ದಕ್ಷಿಣ ಕನ್ನಡ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ನೇಮಕಗೊಂಡಿರುವ ಶಶಿಕಾಂತ್ ಸೆಂಥಿಲ್ 2009 ಐಎಎಸ್ ಬ್ಯಾಚ್ ನ ಅಧಿಕಾರಿಯಾಗಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯಿಂದ ವರ್ಗಾವಣೆ ಯಾಗಿರುವ ಡಾ. ಕೆ. ಜಿ ಜಗದೀಶ್ ಅವರನ್ನು ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ನಿರ್ದೇಶಕರಾಗಿ ಸರ್ಕಾರ ನಿಯುಕ್ತಿಗೊಳಿಸಿದೆ.

2008ರಲ್ಲಿ ನಡೆದ ಯುಪಿಎಸ್ ಸಿ ಪರೀಕೆಯಲ್ಲಿ 9ನೇ ರಾಂಕ್ ಪಡೆದು ಶಶಿಕಾಂತ್ ಟಾಪರ್ ಆಗಿ ಹೊರಹೊಮ್ಮಿದ್ದರು.