LATEST NEWS
ಕೊರೊನಾ ಹಾಟ್ ಸ್ಪಾಟ್ ನಲ್ಲಿ ದಕ್ಷಿಣಕನ್ನಡ ಜಿಲ್ಲೆ
ಕೊರೊನಾ ಹಾಟ್ ಸ್ಪಾಟ್ ನಲ್ಲಿ ದಕ್ಷಿಣಕನ್ನಡ ಜಿಲ್ಲೆ
ಮಂಗಳೂರು ಎಪ್ರಿಲ್ 15: ಕೇಂದ್ರ ಸರಕಾರ ಬಿಡುಗಡೆ ಮಾಡಿರುವ 170 ಹಾಟ್ ಸ್ಪಾಟ್ ಜಿಲ್ಲೆಗಳಲ್ಲಿ ದಕ್ಷಿಣಕನ್ನಡ ಸೇರಿಕೊಂಡಿದೆ. ಕೇಂದ್ರ ಸರ್ಕಾರವು ಜಿಲ್ಲೆಗಳಲ್ಲಿರುವ ಕೊರೊನಾ ಸೋಂಕಿತರು ಹಾಗೂ ಸಾವಿನ ಸಂಖ್ಯೆ ಆಧಾರದ ಮೇಲೆ ವಲಯವಾರು ವಿಂಗಡೆ ಮಾಡಿದೆ. ರಾಜ್ಯದ 8 ಜಿಲ್ಲೆಗಳನ್ನು ಹಾಟ್ ಸ್ಪಾಟ್ ಗಳಾಗಿ ಗುರುತಿಸಲಾಗಿದೆ. ಇದರಲ್ಲಿ ದಕ್ಷಿಣ ಕನ್ನಡ, ಬೀದರ್, ಕಲಬುರಗಿ, ಬಾಗಲಕೋಟೆ, ಧಾರವಾಡ. ಬೆಂಗಳೂರು ನಗರ, ಮೈಸೂರು, ಬೆಳಗಾವಿ ಇದೆ.
ಇನ್ನು ಆರೆಂಜ್ ಜೂನ್ (ನಾನ್ ಹಾಟ್‍ಸ್ಪಾಟ್): ಈ ಪಟ್ಟಿಯಲ್ಲಿ ರಾಜ್ಯದ 11 ಜಿಲ್ಲೆಗಳಿವೆ. ಅವುಗಳೆಂದರೆ ಬಳ್ಳಾರಿ, ಮಂಡ್ಯ, ಬೆಂಗಳೂರು ಗ್ರಾಮಾಂತರ, ದಾವಣಗೆರೆ, ಉಡುಪಿ, ಗದಗ, ತುಮಕೂರು, ಕೊಡಗು, ವಿಜಯಪುರ, ಚಿಕ್ಕಬಳ್ಳಾಪುರ, ಉತ್ತರಕನ್ನಡ ಆಗಿವೆ.
ಹಸಿರು ವಲಯ: ಈ ಪಟ್ಟಿಯಲ್ಲಿ ರಾಜ್ಯದ 11 ಜಿಲ್ಲೆಗಳಿವೆ. ಅವುಗಳೆಂದರೆ ಚಾಮರಾಜನಗರ, ಚಿಕ್ಕಮಗಳೂರು, ಚಿತ್ರದುರ್ಗ, ಹಾಸನ, ಹಾವೇರಿ, ಕೋಲಾರ, ಕೊಪ್ಪಳ, ರಾಯಚೂರು, ರಾಮನಗರ, ಶಿವಮೊಗ್ಗ, ಯಾದಗಿರಿ. ಈ ಭಾಗದಲ್ಲಿ ಯಾವುದೇ ಕೊರೊನಾ ಪ್ರಕರಣಗಳ ಕಂಡು ಬಂದಿಲ್ಲ. ಆದ್ರೂ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳಬೇಕು.
ಸದ್ಯದ ಮಾಹಿತಿಯನ್ನು ಪಡೆದು ಕೇಂದ್ರ ಸರ್ಕಾರ ವಲಯವಾರು ಪಟ್ಟಿ ಬಿಡುಗಡೆ ಮಾಡಿದೆ. ಜೊತೆಗೆ ಪ್ರತಿ ನಾಲ್ಕು ದಿನಗಳಿಗೊಮ್ಮೆ ಈ ಪಟ್ಟಿ ಪರಿಷ್ಕೃತವಾಗುತ್ತದೆ. ಏಪ್ರಿಲ್ 20ರ ಬಳಿಕ ಕೇಂದ್ರ ಸರ್ಕಾರ ಹೊಸ ಪಟ್ಟಿ ಬಿಡುಗಡೆ ಮಾಡಲಿದೆ. ಈ ನಾಲ್ಕು ದಿನಗಳಲ್ಲಿ ಒಂದು ವೇಳೆ ಕೊರೊನಾ ಸೋಂಕಿತರ ಸಂಖ್ಯೆ ಯಾವುದೇ ಜಿಲ್ಲೆ ಭಾರೀ ಏರಿಕೆ ಕಂಡ್ರೆ ಅದನ್ನು ಹಾಟ್‍ಸ್ಪಾಟ್ ಪಟ್ಟಿಗೆ ಸೇರಿಸಲಾಗುತ್ತದೆ ಎಂಬ ಮಾಹಿತಿ ಲಭಿಸಿದೆ.