ಮದ್ಯ ಸಿಗಲ್ಲ ಅಂತ ಕಳ್ಳಭಟ್ಟಿ ತಯಾರಿಸಲು ಹೋಗಿ ಸಿಕ್ಕಿಬಿದ್ದ ಭೂಪ…!

ಸುಳ್ಯ ಎಪ್ರಿಲ್ 4: ಸರ್ಕಾರ ಲಾಕ್ ಡೌನ್ ಘೋಷಣೆ ಮಾಡಿರುವ ಕಾರಣ ಮದ್ಯದಂಗಡಿಗಳಿಗೂ ಈಗಾಗಲೇ ಬೀಗ ಬಿದ್ದಿದೆ.ಆದರೂ ಹಲವು ಕಡೆಗಳಲ್ಲಿ ಕಳ್ಳಬಟ್ಟಿ, ಅಕ್ರಮ ಮದ್ಯ ವ್ಯಾಪಾರಗಳ ಬಗ್ಗೆ ಸುದ್ದಿಗಳು ಕೇಳಿಬರುತ್ತಿದೆ.

ಈ ನಡುವೆ ಗೇರು ಹಣ್ಣಿನ ಸಾರಾಯಿ ತಯಾರಿಕೆಗೆ ಮುಂದಾದ ವ್ಯಕ್ತಿಯೊಬ್ಬ ಪೊಲೀಸರಿಗೆ ಸಿಕ್ಕಿಬಿದ್ದ ಘಟನೆ ಸುಳ್ಯ ತಾಲೂಕಿನ ಬೆಳ್ಳಾರೆ ಪೋಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಬೆಳ್ಳಾರೆ ಕಲ್ಲೋಣಿಯ ಜನಾರ್ದನ ತಮ್ಮ ಮನೆಯಲ್ಲಿ ಗೇರುಹಣ್ಣಿನ ಕಳ್ಳಭಟ್ಟಿ ತಯಾರಿಸಲು ಮುಂದಾದ ವ್ಯಕ್ತಿ. ಈತನಿಂದ ಅಬಕಾರಿ ಇಲಾಖೆಯ ಅಧಿಕಾರಿಗಳು ಗೇರು ಹಣ್ಣಿನ ರಸ, ಗೇರುಹಣ್ಣಿನ ಸಾರಾಯಿ ಮತ್ತು ಅದಕ್ಕೆ ಸಂಬಂಧಿಸಿದಂತೆ ತಯಾರು ಮಾಡುವ ಪಾತ್ರೆಗಳನ್ನು ಪೊಲೀಸರು ವಶ ಪಡಿಸಿಕೊಂಡಿದ್ದಾರೆ.

ಖಚಿತ ಮಾಹಿತಿಯ ಮೇರೆಗೆ ಧಾಳಿ ನಡೆಸಿದ ಸುಳ್ಯದ ಅಬಕಾರಿ ಇಲಾಖೆಯ ಉಪ ನಿರೀಕ್ಷಕಿ ರಾಧಾ ಎಸ್.ಪಿ. ನೇತೃತ್ವದ ತಂಡವು ಈ ದಾಳಿ ನಡೆಸಿದ್ದು, ಪ್ರಕರಣ ದಾಖಲಾಗಿದೆ.