Connect with us

    LATEST NEWS

    ಅಪ್ರಾಪ್ತ ಬಾಲಕನಿಗೆ ತನ್ನ ನಾಲಿಗೆ ನೆಕ್ಕುವಂತೆ ಸೂಚಿಸಿದ ದಲೈ ಲಾಮಾ – ಭಾರೀ ಟೀಕೆ

    ನವದೆಹಲಿ, ಎಪ್ರಿಲ್ 10: ಟಿಬೆಟಿಯನ್ ಆಧ್ಯಾತ್ಮಿಕ ನಾಯಕ ದಲೈ ಲಾಮಾ ಅವರಿಗೆ ಸಂಬಂಧಪಟ್ಟ ವೀಡಿಯೋವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿದೆ. ದಲೈ ಲಾಮಾ ಅಪ್ರಾಪ್ತ ಬಾಲಕನೊಬ್ಬನಿಗೆ ತಮ್ಮ ನಾಲಿಗೆಗೆ ಮುತ್ತಿಟ್ಟು ನೆಕ್ಕುವಂತೆ ಸೂಚಿಸಿರುವುದು ಭಾರೀ ಆಕ್ರೋಶಕ್ಕೆ ಕಾರಣವಾಗಿದೆ.

    ವೀಡಿಯೋದಲ್ಲಿ ಬಾಲಕನೊಬ್ಬ ದಲೈ ಲಾಮಾ ಅವರಿಗೆ ಗೌರವ ಸಲ್ಲಿಸಲು ತಲೆ ಬಾಗಿದ್ದಾನೆ. ಬಳಿಕ ದಲೈ ಲಾಮಾ ಬಾಲಕನಿಗೆ ತನ್ನ ಬಾಯಿಯನ್ನು ತೋರಿಸುತ್ತಾ ನಾಲಿಗೆಯನ್ನು ಹೊರ ಚಾಚಿದ್ದಾರೆ. ಈ ವೇಳೆ ಅವರು ನನ್ನ ನಾಲಿಗೆಯನ್ನು ನೆಕ್ಕುತ್ತೀಯಾ? ಎಂದು ಆತನ ಬಳಿ ಕೇಳಿರುವುದು ಕಂಡುಬಂದಿದೆ.

    ಈ ವೀಡಿಯೋ ಸಾಮಾಜಿಕ ಮಾಧ್ಯಮಗಳಲ್ಲಿ ಕಂಡುಬಂದಿದ್ದೇ ತಡ. ಎಲ್ಲೆಡೆ ಬೌದ್ಧ ಧರ್ಮ ಗುರುವಿನ ವಿರುದ್ಧ ಭಾರೀ ಆಕ್ರೋಶ ವ್ಯಕ್ತವಾಗುತ್ತಿದೆ. ಅಪ್ರಾಪ್ತ ಬಾಲಕನೊಂದಿಗೆ ದಲೈ ಲಾಮಾ ವರ್ತಿಸಿರುವ ರೀತಿಯನ್ನು ನೆಟ್ಟಿಗರು ಅಸಹ್ಯಕರ ಎಂದು ಕರೆದಿದ್ದಾರೆ.

    ದಲೈ ಲಾಮಾ ಸಾರ್ವಜನಿಕವಾಗಿ ಟೀಕೆಗೊಳಗಾಗಿರುವುದು ಇದೇ ಮೊದಲೇನಲ್ಲ. ಕೆಲ ವರ್ಷಗಳ ಹಿಂದೆ ಅವರು ತಮ್ಮ ಉತ್ತರಾಧಿಕಾರಿ ಮಹಿಳೆಯಾಗಬೇಕಿದ್ದರೆ ಅವರು ಅತ್ಯಂತ ಆಕರ್ಷಕವಾಗಿರಬೇಕು ಎಂದು ಹೇಳಿ ವಿವಾದವನ್ನು ಎಳೆದುಕೊಂಡಿದ್ದರು. ಈ ಹೇಳಿಕೆಯಿಂದ ಅವರು ವಿಶ್ವದಾದ್ಯಂತ ಭಾರೀ ಟೀಕೆಗೆ ಒಳಗಾಗಿದ್ದರು.

    Share Information
    Advertisement
    Click to comment

    You must be logged in to post a comment Login

    Leave a Reply