Connect with us

    LATEST NEWS

    ನಟ ದರ್ಶನ್ ಜಾಮೀನಿಗಾಗಿ ದೇವರ ಮೊರೆ ಹೋಗುತ್ತಿರುವ ಪತ್ನಿ ವಿಜಯಲಕ್ಷ್ಮಿ

    ಉಡುಪಿ ಜುಲೈ 26: ತನ್ನದೇ ಅಭಿಮಾನಿಯ ಕೊಲೆ ಆರೋಪದಲ್ಲಿ ಜೈಲು ಪಾಲಾಗಿರುವ ದರ್ಶನಗೆ ಜಾಮೀನು ಸಿಗಲೆಂದು ಪತ್ನಿ ವಿಜಯಲಕ್ಷ್ಮಿ ಇದೀಗ ಟೆಂಪಲ್ ರನ್ ಮಾಡುತ್ತಿದ್ದಾರೆ. ಕೊಲ್ಲೂರು ದೇವಸ್ಥಾನಕ್ಕೆ ಆಗಮಿಸಿರುವ ಅವರು ವಿಶೇಷ ಪೂಜೆ ಸಲ್ಲಿಸಿದ್ದಾರೆ.


    ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಪಾಲಾಗಿರುವ ದರ್ಶನಗೆ ಜಾಮೀನು ಸಿಗುವುದು ಕಷ್ಟವಾಗಿದೆ. ಕೊಲೆ ಆರೋಪ ಇರುವುದರಿಂದ ಕೋರ್ಟ್ ಜಾಮೀನು ನೀಡಲು ನಿರಾಕರಿಸುತ್ತಿದ್ದು. ನಿನ್ನೆ ಮನೆಯೂಟಕ್ಕೂ ಕೊರ್ಟ್ ಅವಕಾಶ ನಿರಾಕರಿಸಿದೆ. ಈ ನಡುವೆ ದರ್ಶನಗ್ಗೆ ಜಾಮೀನು ಕೊಡಿಸಲು ಕುಟುಂಬದವರು ಕಷ್ಟಪಡುತ್ತಿದ್ದಾರೆ.

    ಪತ್ನಿ ವಿಜಯಲಕ್ಷ್ಮಿ ಅವರು ಆಗಾಗ ಜೈಲಿಗೆ ಭೇಟಿ ನೀಡುತ್ತಾ ಗಂಡನಿಗೆ ಧೈರ್ಯ ತುಂಬುತ್ತಿದ್ದಾರೆ. ಕಾನೂನಿನ ಹೋರಾಟದ ಬಗ್ಗೆ ವಕೀಲರ ಜೊತೆ ಸಮಾಲೋಚನೆ ನಡೆಸುತ್ತಿದ್ದಾರೆ. ಈ ನಡುವೆ ವಿಜಯಲಕ್ಷ್ಮಿ ಅವರು ದೇವರ ಮೊರೆ ಹೋಗಿದ್ದಾರೆ. ವಿವಿಧ ದೇವಾಲಯಗಳಿಗೆ ತೆರಳುತ್ತಿದ್ದಾರೆ. ವಿಜಯಲಕ್ಷ್ಮಿ ಅವರು ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಭೇಟಿ ನೀಡಿದ್ದಾರೆ.

    ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಕೊಲ್ಲೂರು ಮೂಕಾಂಬಿಕೆ ದೇವಸ್ಥಾನಕ್ಕೆ ಆಪ್ತರ ಜೊತೆ ಬಂದು ವಿಜಯಲಕ್ಷ್ಮೀ ಅವರು ದರ್ಶನ ಪಡೆದಿದ್ದಾರೆ. ಶುಕ್ರವಾರ ಬೆಳಗ್ಗೆ ಅವರು ನವ ಚಂಡಿಕಾ ಹೋಮ ಮಾಡಿದ್ದಾರೆ. ದರ್ಶನ್​ ಅವರು ಈ ಕಷ್ಟದ ಪರಿಸ್ಥಿತಿಯಿಂದ ಹೊರಬರಲಿ ಎಂದು ವಿಜಯಲಕ್ಷ್ಮಿ ಅವರು ದೇವರಲ್ಲಿ ಪ್ರಾರ್ಥನೆ ಮಾಡಲಿದ್ದಾರೆ.

    Share Information
    Advertisement
    Click to comment

    You must be logged in to post a comment Login

    Leave a Reply