Connect with us

    LATEST NEWS

    ದಸರಾ ಫ್ಲೆಕ್ಸ್, ಬ್ಯಾನರ್ ಗಳಿಗೆ ಅಕ್ರಮವಾಗಿ ವಿದ್ಯುತ್ ಸಂಪರ್ಕ ಪಡೆದರೆ ದಂಡ : ಮಹಾನಗರಪಾಲಿಕೆ ಎಚ್ಚರಿಕೆ

    ಮಂಗಳೂರು ಸೆಪ್ಟೆಂಬರ್ 26: : ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ದಸರಾ ಹಬ್ಬದ ಪ್ರಯುಕ್ತ ನಗರದ ಮುಖ್ಯ ರಸ್ತೆಗಳಲ್ಲಿ ಅಲಂಕಾರಿಕ ವಿದ್ಯುತ್ ದೀಪಗಳನ್ನು ಅಳವಡಿಸಲಾಗಿರುತ್ತದೆ. ಹಲವಾರು ಸ್ಥಳಗಳಲ್ಲಿ ಸಾರ್ವಜನಿಕ ಹಾಗೂ ಖಾಸಗಿ ಸಂಘ ಸಂಸ್ಥೆಗಳು ತಮ್ಮ ತಮ್ಮ ಅನಧಿಕೃತ ಫ್ಲೆಕ್ಸ್, ಬ್ಯಾನರ್ ಗಳನ್ನು ಅಳವಡಿಸಿದ್ದು, ಅನಧಿಕೃತ ಫ್ಲೆಕ್ಸ್, ಬ್ಯಾನರ್ ಗಳಿಗೆ ಅಲಂಕಾರಿಕ ದೀಪಗಳನ್ನು ಅಳವಡಿಸಲು ಮಂಗಳೂರು ನಗರ ಪಾಲಿಕೆಯಿಂದ ಅಳವಡಿಸಿರುವ ಕಂಬ ಮತ್ತು ವಿದ್ಯುತ್ ದೀಪಗಳ ಸಂಪರ್ಕದಿಂದ ಅತಿಕ್ರಮಣವಾಗಿ ವಿದ್ಯುತ್ ಸಂಪರ್ಕ ಪಡೆದಿರುವುದು ಕಂಡುಬಂದಿದೆ.


    ಇಂತಹ ಅತಿಕ್ರಮಣ ಸಂಪರ್ಕಗಳಿಗೆ ಕಾನೂನು ಕ್ರಮ ಕೈಗೊಂಡು ದಂಡ ವಿಧಿಸಲಾಗುವುದು ಹಾಗೂ ಯಾವುದೇ ರೀತಿ ಅವಘÀಡಗಳು ಸಂಭವಿಸಿದ್ದಲ್ಲಿ ಫ್ಲೆಕ್ಸ್, ಬ್ಯಾನರ್ ಅಳವಡಿಸಿದವರನ್ನೇ ನೇರ ಹೊಣೆಗಾರರನ್ನಾಗಿ ಮಾಡಲಾಗುವುದು ಎಂದು ಮಂಗಳೂರು ಮಹಾನಗರಪಾಲಿಕೆ ಆಯುಕ್ತರು ಎಚ್ಚರಿಕೆ ನೀಡಿದ್ದಾರೆ.

    Share Information
    Advertisement
    Click to comment

    You must be logged in to post a comment Login

    Leave a Reply