LATEST NEWS
ಮಂಗಳೂರು ದಸರಾ ರಜೆ ಕಡಿತ ವಾಪಾಸ್ ಪಡೆದ ರಾಜ್ಯ ಸರಕಾರ
ಮಂಗಳೂರು ದಸರಾ ರಜೆ ಕಡಿತ ವಾಪಾಸ್ ಪಡೆದ ರಾಜ್ಯ ಸರಕಾರ
ಮಂಗಳೂರು ಸೆಪ್ಟೆಂಬರ್ 27: ಈ ಬಾರಿ ಮಂಗಳೂರು ದಸರಾ ರಜೆ ಕಡಿತಗೊಳಿಸಿದ್ದ ಆದೇಶವನ್ನು ರಾಜ್ಯ ಸರಕಾರ ಭಾರಿ ವಿರೋಧ ವ್ಯಕ್ತವಾದ ಹಿನ್ನಲೆಯಲ್ಲಿ ಹಿಂಪಡೆದಿದೆ.
ಜಿಲ್ಲೆಯಲ್ಲಿ ಸುರಿದ ಭಾರಿ ಮಳೆ ಹಿನ್ನಲೆಯಲ್ಲಿ ಜಿಲ್ಲೆಯ ಎಲ್ಲಾ ಶಾಲಾ ಕಾಲೇಜುಗಳಿಗೆ ಈ ಬಾರಿ ಹೆಚ್ಚುವರಿ ರಜೆಯನ್ನು ನೀಡಲಾಗಿತ್ತು. ಈ ಹಿನ್ನಲೆಯಲ್ಲಿ ಶೈಕ್ಷಣಿಕ ಪಾಠಗಳಿಗೆ ಹಿನ್ನಡೆಯಾಗುವ ಹಿನ್ನಲೆಯಲ್ಲಿ ಈ ಬಾರಿಯ ದಸರಾ ರಜೆಯಲ್ಲಿ ಕಡಿತಗೊಳಿಸಲು ಶಿಕ್ಷಣ ಇಲಾಖೆ ತೀರ್ಮಾನ ಕೈಗೊಂಡಿತ್ತು.
ಆದರೆ ಮಂಗಳೂರು ದಸರಾ ರಜೆ ಕಡಿತಗೊಳಿಸುವ ವಿಚಾರಕ್ಕೆ ಭಾರಿ ವಿರೋಧ ವ್ಯಕ್ತವಾಗಿತ್ತು. ವಿವಿಧ ಹಿಂದೂ ಪರ ಸಂಘಟನೆ ಹಾಗೂ ಸ್ಥಳೀಯ ಶಾಸಕ ವೇದವ್ಯಾಸ್ ಕಾಮತ್ ಕೂಡ ದಸರಾ ರಜೆ ಕಡಿತಕ್ಕೆ ವಿರೋಧ ವ್ಯಕ್ತಪಡಿಸಿ, ಈ ಕುರಿತಂತೆ ಮನವಿಯನ್ನು ಸಲ್ಲಿಸಿದ್ದರು.
ಈ ಹಿನ್ನಲೆಯಲ್ಲಿ ಈಗ ರಾಜ್ಯ ಸರಕಾರ ತನ್ನ ನಿರ್ಧಾರವನ್ನು ಬದಲಿಸಿ, ಆದೇಶವನ್ನು ಹಿಂಪಡೆದಿದೆ.
ಮಂಗಳೂರಿನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಜಿಲ್ಲಾ ಉಸ್ತುವಾರಿ ಸಚಿವ ಖಾದರ್ ಮಂಗಳೂರಿನಲ್ಲಿ ದಸರಾ ರಜೆಯಲ್ಲಿ ಯಾವುದೇ ಕಡಿತ ಇಲ್ಲ ಎಂದು ತಿಳಿಸಿದ್ದಾರೆ. ಈ ಬಗ್ಗೆ ಶಿಕ್ಷಣ ಇಲಾಖೆ ಎಂದಿನಂತೆ ರಜೆ ನೀಡಲಾಗುವುದು ಎಂದು ತಿಳಿಸಿದ್ದಾರೆ.