Connect with us

KARNATAKA

ಅಯೋಧ್ಯಾ ರಾಮಮಂದಿರ ಉದ್ಘಾಟನೆಗೆ ಮುಹೂರ್ತ ಫಿಕ್ಸ್, ಪ್ರಧಾನಿ ಮೋದಿಗೆ ಅಧಿಕೃತ ಆಹ್ವಾನ..!

ನವದೆಹಲಿ : ಕೋಟ್ಯಾಂತರ ಹಿಂದೂಗಳ ಶತಮಾನಗಳ ಕನಸು, ಪರಿಶ್ರಮ ಫಲಕೊಟ್ಟಿದ್ದು ಕನಸಿನ ಅಯೋಧ್ಯಾ ಶ್ರೀರಾಮ ಮಂದಿರದ ಲೋಕಾರ್ಪಣಾ ಕಾರ್ಯಕ್ರಮಕ್ಕೆ ಮುಹೂರ್ತ ಫಿಕ್ಸ್ ಆಗಿದೆ.

2024 ರ ಜನವರಿ 22ರಂದು ಅಯೋಧ್ಯೆಯಲ್ಲಿ ಭವ್ಯವಾದ ಶ್ರೀರಾಮ ಮಂದಿರ ಉದ್ಘಾಟನೆ ನೆರವೇರಲಿದೆ. ಇದರ ಆಹ್ವಾನ ಪತ್ರಿಕೆಯನ್ನು ದೇಶದ ಗೌರವಾನ್ವಿತ ಪ್ರಧಾನಮಂತ್ರಿಗಳಾದ ನರೇಂದ್ರ ಮೋದಿಯವರಿಗೆ ರಾಮ ಜನ್ಮಭೂಮಿ ಟ್ರಸ್ಟ್ ಪ್ರಮುಖರು ಉಡುಪಿ ಪೇಜಾವರ ಮಠಾಧೀಶರ ದಿವ್ಯ ಉಪಸ್ಥಿತಿಯಲ್ಲಿ ನೀಡಿದ್ದಾರೆ. ರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರೈ ಜನವರಿ 22 ರಂದು ದೇವಾಲಯದಲ್ಲಿ ಶ್ರೀರಾಮನ ವಿಗ್ರಹವನ್ನು ಪ್ರತಿಷ್ಠಾಪಿಸಲಾಗುವುದು ಎಂದು ಖಚಿತಪಡಿಸಿದ್ದಾರೆ. ಇದರ ಬೆನ್ನಲ್ಲೇ ಟ್ರಸ್ಟ್‌ನ ಯತಿಗಳು ಖುದ್ದು ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿ, ಉದ್ಘಾಟನೆಗೆ ಆಹ್ವಾನ ಕೂಡ ನೀಡಿದ್ದು ಇದಕ್ಕೆ ಪುಷ್ಟಿ ನೀಡಿದೆ.

ಪ್ರಧಾನ ಮಂತ್ರಿ ನಂರೇಂದ್ರ ಮೋದಿ ಅವರು ಇತರ ಗಣ್ಯರ ಸಮ್ಮುಖದಲ್ಲಿ ರಾಮ ಮಂದಿರವನ್ನು ಲೋಕಾರ್ಪಣೆ ಮಾಡಲಿದ್ದಾರೆ.ರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಅವರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದ್ದಾರೆ. ಜನವರಿ 22, 2024 ರಂದು ಉತ್ತರ ಪ್ರದೇಶದ ಅಯೋಧ್ಯೆಯ ರಾಮಮಂದಿರದ ಗರ್ಭಗೃಹದಲ್ಲಿ ಶ್ರೀರಾಮನ ವಿಗ್ರಹವನ್ನು ಸ್ಥಾಪಿಸುವ ದಿನಾಂಕವನ್ನು ದೃಢಪಡಿಸಿದ್ದು, ಪ್ರಧಾನಿ ನರೇಂದ್ರ ಮೋದಿ ಅವರಿಗೆ ಅಧಿಕೃತ ಆಹ್ವಾನ ನೀಡಿದ್ದಾರೆ.ಇನ್ನು ಶ್ರೀರಾಮ ಮಂದಿರ ಉದ್ಘಾಟನೆಗೆ ತಮಗೆ ಆಹ್ವಾನ ನೀಡಿರುವುದಕ್ಕೆ ಪ್ರಧಾನಿ ನರೇಂದ್ರ ಮೋದಿ ಸಂತಸ ವ್ಯಕ್ತಪಡಿಸಿದ್ದಾರೆ. “ಇಂದು ಭಾವನೆಗಳ ತುಂಬಿದ ದಿನವಾಗಿದೆ. ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ನ ಅಧಿಕಾರಿಗಳು ನನ್ನನ್ನು ಭೇಟಿಯಾಗಲು ನನ್ನ ನಿವಾಸಕ್ಕೆ ಬಂದಿದ್ದರು. ಅವರು ಶ್ರೀರಾಮ ಮಂದಿರದ ಪ್ರತಿಷ್ಠಾಪನೆಯ ಸಂದರ್ಭದಲ್ಲಿ ಅಯೋಧ್ಯೆಗೆ ಬರುವಂತೆ ನನ್ನನ್ನು ಆಹ್ವಾನಿಸಿದರು. ಈ ಐತಿಹಾಸಿಕ ಸಂದರ್ಭಕ್ಕೆ ಸಾಕ್ಷಿಯಾಗುವುದು ನನ್ನ ಜೀವನದ ಅದೃಷ್ಟ ಅಂತ ಪ್ರಧಾನಿ ಟ್ವೀಟ್ ಮಾಡಿದ್ದಾರೆ.


ಆಗಸ್ಟ್ 5, 2020 ರಂದು, ಪ್ರಧಾನಿ ಮೋದಿ ಅವರು ದೇವಾಲಯದ ನಿರ್ಮಾಣಕ್ಕೆ ಭೂಮಿ ಪೂಜೆ ನೆರವೇರಿಸಿದ್ದರು. ರಾಮ ಮಂದಿರದ ಸಮೀಪವಿರುವ 70 ಎಕರೆ ಪ್ರದೇಶದಲ್ಲಿ ವಾಲ್ಮೀಕಿ, ಕೇವತ್, ಶಬರಿ, ಜಟಾಯು, ಸೀತಾ, ಗಣೇಶ ಮತ್ತು ಶೇಷಾವತಾರ (ಲಕ್ಷ್ಮಣ) ದೇವಾಲಯಗಳನ್ನು ನಿರ್ಮಿಸಲಾಗುತ್ತಿದೆ.ಆಯತಾಕಾರದ, ಎರಡು ಅಂತಸ್ತಿನ ‘ಪರಿಕ್ರಮ’ ರಸ್ತೆಯನ್ನು ಸಹ ನಿರ್ಮಿಸಲಾಗುತ್ತಿದೆ., ಇದು ದೇವಾಲಯ ಮತ್ತು ಅದರ ಪ್ರಾಂಗಣವನ್ನು ಒಳಗೊಂಡಿರುವ ಎಂಟು ಎಕರೆ ಭೂಮಿಯನ್ನು ಸುತ್ತುವರೆದಿದೆ. ಅದರ ಪೂರ್ವ ಭಾಗದಲ್ಲಿ ಮರಳುಗಲ್ಲಿನ ಪ್ರವೇಶ ದ್ವಾರವನ್ನು ನಿರ್ಮಿಸಲಾಗುವುದು. ದೇವಾಲಯದ ಮುಖ್ಯ ದೇವಾಲಯದಲ್ಲಿ ರಾಜಸ್ಥಾನದ ಮಕ್ರಾನಾ ಬೆಟ್ಟಗಳಿಂದ ಬಿಳಿ ಅಮೃತಶಿಲೆಯನ್ನು ಬಳಸಲಾಗುತ್ತಿದೆ.


.

Share Information
Continue Reading
Advertisement
Click to comment

Leave a Reply

Your email address will not be published. Required fields are marked *