Connect with us

    LATEST NEWS

    ಭೂಗತ ಪಾತಕಿ ದಾವೂದ್ ಇಬ್ರಾಹಿಂಗೆ ವಿಷ ಕೊಟ್ಟ ಅನಾಮಿಕ ವ್ಯಕ್ತಿ – ಆಸ್ಪತ್ರೆಗೆ ದಾಖಲು

    ಕರಾಚಿ ಡಿಸೆಂಬರ್ 18: ಪಾಕಿಸ್ತಾನದಲ್ಲಿ ಅನಾಮಿಕ ವ್ಯಕ್ತಿಯ ಉಪಟಳ ಜಾಸ್ತಿಯಾಗಿದ್ದು, ಇದೀಗ ಭಾರತಕ್ಕೆ ಬೇಕಾಗಿರುವ ಉಗ್ರರು ಭೂಗತ ಪಾತಕಿಗಳು ಒಬ್ಬರಾಗಿ ಒಬ್ಬರು ಸ್ಮಶಾನ ಸೇರುತ್ತಿದ್ದಾರೆ. ಈ ನಡುವೆ ಭಾರತಕ್ಕೆ ಬೇಕಾಗಿದ್ದ ಭೂಗತ ಪಾತಕಿ ದಾವೂದ್ ಇಬ್ರಾಹಿಂಗೆ ವಿಷಪ್ರಾಶನ ಮಾಡಲಾಗಿದೆ ಎಂಬ ಸುದ್ದಿ ಬಂದಿದ್ದು. ಪಾಕಿಸ್ತಾನದ ಕರಾಚಿಯಲ್ಲಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ವರದಿಯಾಗಿದೆ, ಆಸ್ಪತ್ರೆ ಸುತ್ತಮುತ್ತ ತೀವ್ರ ಭದ್ರತೆ ಕಲ್ಪಿಸಲಾಗಿದೆ.


    ಕಳೆದ ಎರಡು ದಿನಗಳಿಂದ ವೈದ್ಯಕೀಯ ಆರೈಕೆಯಲ್ಲಿದ್ದು, ವಿಷಪ್ರಾಶನವಾಗಿರಬಹುದು ಎಂಬ ಊಹಾಪೋಹಗಳಿಗೆ ಪುಷ್ಟಿ ನೀಡಿದೆ. ಸದ್ಯಕ್ಕೆ, ಆಸ್ಪತ್ರೆಯಿಂದ ಯಾವುದೇ ಅಧಿಕೃತ ಹೇಳಿಕೆ ಬಂದಿಲ್ಲ. ದಾವೂದ್ ಇಬ್ರಾಹಿಂ ಆಸ್ಪತ್ರೆಯ ಮಹಡಿಯಲ್ಲಿ ಏಕೈಕ ನಿವಾಸಿಯಾಗಿದ್ದು, ಉನ್ನತ ಆಸ್ಪತ್ರೆ ಅಧಿಕಾರಿಗಳು ಮತ್ತು ಆತನ ಹತ್ತಿರದ ಕುಟುಂಬ ಸದಸ್ಯರಿಗೆ ಮಾತ್ರ ಪ್ರವೇಶವನ್ನು ಕಲ್ಪಿಸಲಾಗಿದೆ.

    ಭಾರತಕ್ಕೆ ಮೋಸ್ಟ್ ವಾಂಟೆಡ್ ಭೂಗತ ಪಾತಕಿಯಾಗಿರುವ ದಾವೂದ್ ಇಬ್ರಾಹಿಂಗಾಗಿ ಮುಂಬೈ ಪೊಲೀಸರು ಆತನ ಸಂಬಂಧಿಕರಾದ ಅಲಿಶಾ ಪಾರ್ಕರ್ ಮತ್ತು ಸಾಜಿದ್ ವಾಗ್ಲೆ ಅವರಿಂದ ಹೆಚ್ಚಿನ ಮಾಹಿತಿ ಪಡೆಯಲು ಪ್ರಯತ್ನಿಸುತ್ತಿದ್ದಾರೆ.
    ಜನವರಿಯಲ್ಲಿ, ದಾವೂದ್‌ನ ಸಹೋದರಿ ಹಸೀನಾ ಪಾರ್ಕರ್‌ನ ಮಗ ರಾಷ್ಟ್ರೀಯ ತನಿಖಾ ಸಂಸ್ಥೆಗೆ ಭೂಗತ ಲೋಕದ ಡಾನ್ ಎರಡನೇ ಬಾರಿಗೆ ಮದುವೆಯಾದ ನಂತರ ಕರಾಚಿಯಲ್ಲಿ ಉಳಿದುಕೊಂಡಿದ್ದಾನೆ ಎಂದು ತಿಳಿಸಿದ್ದರು.

    Share Information
    Advertisement
    Click to comment

    You must be logged in to post a comment Login

    Leave a Reply