Connect with us

UDUPI

ಟಿಪ್ಪು ಜಯಂತಿ ಉಡುಪಿಯಲ್ಲಿ ನಿಷೇಧಾಜ್ಞೆ ಜಾರಿ

ಟಿಪ್ಪು ಜಯಂತಿ ಉಡುಪಿಯಲ್ಲಿ ನಿಷೇಧಾಜ್ಞೆ ಜಾರಿ

ಉಡುಪಿ ನವೆಂಬರ್ 8: ನವೆಂಬರ್ 10 ರಂದು ರಾಜ್ಯಾದ್ಯಂತ ಟಿಪ್ಪುಜಯಂತಿ ಆಚರಣೆ ನಡೆಸಲು ರಾಜ್ಯ ಸರಕಾರ ನಿರ್ಧರಿಸಿದ್ದು, ಇದಕ್ಕೆ ಬಿಜೆಪಿ ಹಾಗೂ ಹಿಂದೂ ಸಂಘಟನೆಗಳು ಭಾರಿ ವಿರೋಧ ವ್ಯಕ್ತಪಡಿಸಿವೆ.

ಈ ಹಿನ್ನಲೆಯಲ್ಲಿ ಉಡುಪಿ ಜಿಲ್ಲೆಯಾದ್ಯಂತ ಇಂದಿನಿಂದ ಸೆಕ್ಷನ್ ಜಾರಿಗೊಳಿಸಿ ಉಡುಪಿ ಜಿಲ್ಲಾಧಿಕಾರಿ ಪ್ರಿಯಾಂಕ ಮೇರಿ ಫ್ರಾನ್ಸಿಸ್ ಆದೇಶಿಸಿದ್ದಾರೆ.

ಇಂದು ಬೆಳಿಗ್ಗೆ 6 ರಿಂದ ನವೆಂಬರ್ 11 ಬೆಳಿಗ್ಗೆ 6 ರ ವರೆಗೂ ಸೆಕ್ಷನ್ 144 ಜಾರಿಯಲ್ಲಿರುತ್ತದೆ. ಟಿಪ್ಪು ಜಯಂತಿ ವಿರೋಧಿಸಿ ಪ್ರತಿಭಟನೆ ನಡೆಯುವ ಸಾಧ್ಯತೆ ಇರುವುದರಿಂದ ಮುಂಜಾಗೃತಾ ಕ್ರಮವಾಗಿ ಸೆಕ್ಷನ್ 144 ನ್ನು ಜಾರಿಗೊಳಿಸಲಾಗುತ್ತಿದೆ.

Facebook Comments

comments