LATEST NEWS
ಮಾಸ್ಕ್ ಇಲ್ಲದೆ ಮೆಹಂದಿ ಕಾರ್ಯಕ್ರಮದಲ್ಲಿ ಭಾಗಿಯಾದ ಉಡುಪಿ ಜಿಲ್ಲಾಧಿಕಾರಿ….!
ಉಡುಪಿ ಎಪ್ರಿಲ್ 24: ಸಾರ್ವಜನಿಕರಿಗೆ ಮಾಸ್ಕ್ ಹಾಕದಿದ್ದರೆ ಕ್ರಿಮಿನಲ್ ಕೇಸ್ ದಾಖಲಿಸಲು ಆದೇಶ ನೀಡುವ ಉಡುಪಿ ಜಿಲ್ಲಾಧಿಕಾರಿಯವರೇ ಕೊವಿಡ್ ನಿಯಮಗಳನ್ನು ಗಾಳಿ ತೂರಿದ್ದು, ಮದರಂಗಿ ಕಾರ್ಯಕ್ರಮವೊಂದರಲ್ಲಿ ಉಡುಪಿ ಜಿಲ್ಲಾಧಿಕಾರಿ ಜಗದೀಶ್ ಮಾಸ್ಕ್ ಇಲ್ಲದೆ ಭಾಗವಹಿಸಿರುವ ಪೋಟೋ ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಈಗಾಗಲೇ ಕೊರೊನಾ ಎರಡನೇ ಅಲೆ ಹಿನ್ನಲೆ ರಾಜ್ಯಸರಕಾರ ಕಟ್ಟುನಿಟ್ಟಿನ ಮಾರ್ಗಸೂಚಿಗಳನ್ನು ಹೊರಡಿಸಿದ್ದು, ಮದುವೆ ಸಮಾರಂಭಗಳಲ್ಲಿ ಮಾಸ್ಕ್ ಹಾಗೂ ಸಾಮಾಜಿಕ ಅಂತರ ಇಲ್ಲದೆ ಭಾಗವಹಿಸಿದರೆ ಕಾನೂನು ಕ್ರಮದ ಎಚ್ಚರಿಕೆ ನೀಡಿದೆ. ಆದರೆ ಉಡಪಿ ಜಿಲ್ಲಾಧಿಕಾರಿ ಜಗದೀಶ್ ಅವರು ನಿನ್ನೆ ಶುಕ್ರವಾರ ರಾತ್ರಿ ಎಡಿಷನಲ್ ಎಸ್ಪಿ ಅವರ ಮಗಳ ಮದುವೆಯ ಮೆಹಂದಿ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದು ಮಾತ್ರವಲ್ಲದೆ ಮಾಸ್ಕ್ ಇಲ್ಲದೇ ಫೋಟೋ ಫೋಸ್ ಕೊಟ್ಟಿರುವ ಘಟನೆ. ಅವರು ಭಾಗವಹಿಸಿರುವ ಕಾರ್ಯಕ್ರಮಗಳ ಪೋಟೋ ವಿಡಿಯೋ ಇದೀಗ ವೈರಲ್ ಆಗಿದೆ.
ರಾಜ್ಯ ಸರ್ಕಾರ ಕೊರೊನಾ ಹಿನ್ನಲೆಯಲ್ಲಿ ಕಾರ್ಯಕ್ರಮಗಳಲ್ಲಿ ಇಂತಿಷ್ಟೇ ಜನರು ಭಾಗಿಯಾಗಬೇಕೆಂಬ ನಿಯಮ ಜಾರಿಗೊಳಿಸಿದೆ. ಅದರೂ ಇಲ್ಲಿ ಎಲ್ಲಾ ನಿಯಮಗಳನ್ನು ಗಾಳಿಗೆ ತೂರಲಾಗಿದೆ. ಮೊನ್ನೆಯಷ್ಟೇ ಬಸ್ಸಿನಿಂದ ವಿದ್ಯಾರ್ಥಿಗಳನ್ನು ಕೆಳಗಿಳಿಸಿ ಆಕ್ರೋಶಕ್ಕೆ ಗುರಿಯಾಗಿದ್ದ ಜಿಲ್ಲಾಧಿಕಾರಿ ವಿರುದ್ದ ನೆಟ್ಟಿಗರು ಕಿಡಿಗಾರಿದ್ದು ಬಡವರಿಗೊಂದು ಕಾನೂನು, ಸಿರಿವಂತರಿಗೆ ಒಂದು ಕಾನೂನು ಎಂಬ ಸಂದೇಹ ಬರುತ್ತದೆ ಎಂದು ಟೀಕಿಸಿದ್ದಾರೆ.