LATEST NEWS
ಸುರತ್ಕಲ್ ಟೋಲ್ ಗೇಟ್ ಜಿಲ್ಲಾಧಿಕಾರಿ ನೇತೃತ್ವದ ಸಭೆ ವಿಫಲ
ಸುರತ್ಕಲ್ ಟೋಲ್ ಗೇಟ್ ಜಿಲ್ಲಾಧಿಕಾರಿ ನೇತೃತ್ವದ ಸಭೆ ವಿಫಲ
ಮಂಗಳೂರು ಅಕ್ಟೋಬರ್ 30: ಸುರತ್ಕಲ್ ಟೋಲ್ ಗೇಟ್ ವಿರೋಧಿ ಹೋರಾಟಗಾರರು ಹಾಗೂ ದಕ್ಷಿಣಕನ್ನಡ ಜಿಲ್ಲಾಧಿಕಾರಿ ನಡುವೆ ನಡೆಗ ಸಭೆ ವಿಫಲವಾಗಿದೆ. ಈ ಹಿನ್ನಲೆಯಲ್ಲಿ ಅಕ್ರಮ ಸುರತ್ಕಲ್ ಟೋಲ್ ಗೇಟ್ ವಿರೋಧಿ ಹೋರಾಟ 9ನೇ ದಿನಕ್ಕೆ ಕಾಲಿರಿಸಿದೆ.
ಕಳೆದ 8 ದಿನಗಳಿಂದ ಸುರತ್ಕಲ್ ಟೋಲ್ ಗೇಟ್ ನ್ನು ಮುಚ್ಚಬೇಕೆಂದು ಆಗ್ರಹಿಸಿ ನಡೆಯುತ್ತಿರುವ ಅನಿರ್ಧಿಷ್ಠಾವಧಿ ಧರಣಿ ನಡೆಯುತ್ತಿದೆ. ದಿನದಿಂದ ದಿನಕ್ಕೆ ಪ್ರತಿಭಟನೆಯ ಕಾವು ಹೆಚ್ಚಾಗುತ್ತಿದ್ದ, ಸಮಸ್ಸೆಯ ಬಗೆಹರಿಯದಿದ್ದಲ್ಲಿ ಹೋರಾಟದ ರೂಪುರೇಷೆ ಬದಲಾಗಲಿದೆ ಎಂದು ಪ್ರತಿಭಟನಾಕಾರರು ಈಗಾಗಲೇ ಎಚ್ಚರಿಕೆ ನೀಡಿದ್ದಾರೆ.
ಈ ಹಿನ್ನಲೆಯಲ್ಲಿ ದಕ್ಷಿಣಕನ್ನಡ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಸುರತ್ಕಲ್ ಟೋಲ್ ಗೇಟ್ ಹೋರಾಟಗಾರರ ಹಾಗೂ ಅಧಿಕಾರಿಗಳ ಸಭೆ ನಡೆಯಿತು. ಈ ಸಭೆಯಲ್ಲಿ ಹೋರಾಟಗಾರರು ಕೇಳಿದ ಯಾವ ಪ್ರಶ್ನೆಗಳಿಗೂ ಪ್ರಾಧಿಕಾರದ ಪ್ರತಿನಿಧಿಗಳಿಂದ ಸರಿಯಾದ ಉತ್ತರ ಸಿಗಲಿಲ್ಲ ಎಂದು ಹೇಳಲಾಗಿದೆ.
ಈ ಸಭೆಯಲ್ಲಿ ಜಿಲ್ಲಾಧಿಕಾರಿಗಳು ಈ ಕೆಳಗಿನ ಕೆಲವು ತೀರ್ಮಾನಗಳನ್ನು ಪ್ರಕಟಿಸಿದ್ದಾರೆ.
* ಕೂಳೂರು ಹಳೆಯ ಸೇತುವೆಯನ್ಜು ಏಕಾ ಏಕಿ ಮುಚ್ವುವುದಿಲ್ಲ. ಜನತೆಯ, ಜನಪ್ರತಿನಿಧಿಗಳ ಅಭಿಪ್ರಾಯ ಪಡೆಯಲಾಗುವುದು. ಅದಕ್ಕಗಿ ಒಂದು ಉಪಸಮಿತಿ ನೇಮಕ ಮಾಡಿದ್ದೇವೆ
ಹೆದ್ದಾರಿ ಪ್ರಾಧಿಕಾರದ ಸಮಸ್ಯೆಗಳು ಸ್ಥಳೀಯವಾಗಿ ಪರಿಹಾರವಾಗುವುದಿಲ್ಲ.
ನಾಳೆಯೆ ರಾಜ್ಯ ಸರಕಾರದ ಮುಖ್ಯ ಕಾರ್ಯದರ್ಶಿ, ಹಾಗೂ ಹೆದ್ದಾರಿ ಪ್ರಾಧಿಕಾರದ ರಾಜ್ಯ ಮಟ್ಟದ ನಿರ್ದೇಶಕರಲ್ಲಿ ಟೋಲ್ ಗೇಟ್ ವಿಲೀನ ತೀರ್ಮಾನದ ಉಲ್ಲಂಘನೆ ಆಗಿರುವ ಕುರಿತು ಮಾತನಾಡಲಾಗುವುದು
ಉಸ್ತುವಾರಿ ಸಚಿವರು ನವಂಬರ್ 1 ರಂದು ಮಂಗಳೂರಿಗೆ ಆಗಮಿಸುತ್ತಿದ್ದು.ಅವರ ಅಧ್ಯಕ್ಷತೆಯಲ್ಲಿ ಸಭೆ ನಡೆಸುವುದು.
ಈ ಸಮಸ್ಯೆಗಳು ರಾಜ್ಯ ಮಟ್ಟದಲ್ಲಿ ಇತ್ಯರ್ಥ ಆಗಬೇಕಿದೆ. ಅದಕ್ಕಾಗಿ ಒಂದು ವಾರದೊಳಗಡೆ ಬೆಂಗಳೂರಿನಲ್ಲಿ ಮುಖ್ಯಕಾರ್ಯದರ್ಶಿಗಳ ನೇತೃತ್ವದಲ್ಲಿ ಸಭೆ ನಡೆಸಿ ಟೋಲ್ ಗೇಟ್ ಸಮಸ್ಯೆಯನ್ನು ಇತ್ಯರ್ಥ ಪಡಿಸುವುದು.
ಈ ರೀತಿಯ ತೀರ್ಮಾನಗಳನ್ನು ಜಿಲ್ಲಾಧಿಕಾರಿಗಳು ಪ್ರಕಟಿಸಿದರು. ಜಿಲ್ಲಾಧಿಕಾರಿಗಳ ಮಧ್ಯಪ್ರವೇಶ ಆಶಾದಾಯಕವಿತ್ತು. ಅಲ್ಲದೇ ಬೇಡಿಕೆ ಈಡೇರುವವರಗೆ ಅನಿರ್ಧಿಷ್ಟಾವಧಿ ಧರಣಿ ಮುಂದುವರಿದಿದೆ.