Connect with us

DAKSHINA KANNADA

ಕೋವಿಡ್​ ಬಗ್ಗೆ ಜಾಗೃತಿ ಮೂಡಿಸಲು ಫೀಲ್ಡಿಗಿಳಿದ ಜಿಲ್ಲಾಧಿಕಾರಿ

ಮಂಗಳೂರು, ಮಾರ್ಚ್ 23 : ಕೊರೊನಾ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಾಗುತಿದ್ದರು ಜನರು ಕೋವಿಡ್​ ನಿಯಮಗಳನ್ನು ಗಾಳಿಗೆ ತೂರುತ್ತಿರುವುದರಿಂದ ಜಾಗೃತಿ ಮೂಡಿಸಲು ಸ್ವತಃ ದ.ಕ. ಜಿಲ್ಲಾಧಿಕಾರಿಯೇ ಫೀಲ್ಡಿಗಿಳಿದಿದ್ದಾರೆ.

ಕೋವಿಡ್ ಪ್ರಮಾಣ ಹೆಚ್ಚುತ್ತಿರುವ ಹಿನ್ನೆಲೆ ಮಾ.15ರಂದು ಮತ್ತೆ ಹೊಸ ಮಾರ್ಗಸೂಚಿ ಹೊರಡಿಸಿದ್ದರೂ ಜನತೆ ಇನ್ನೂ ಎಚ್ಚೆತ್ತಿಲ್ಲ‌. ಮಾಸ್ಕ್ ಧರಿಸದೆ, ಸಾಮಾಜಿಕ ಅಂತರ ಕಾಪಾಡದೆ ಓಡಾಡ್ತಿದ್ದಾರೆ. ಇದರಿಂದ ಬೇಸತ್ತ ಜಿಲ್ಲಾಧಿಕಾರಿ ಡಾ‌.ಕೆ‌.ವಿ.ರಾಜೇಂದ್ರ ಅವರು, ಮಾಲ್, ಮಾರ್ಕೆಟ್, ಬಸ್ ನಿಲ್ದಾಣ ಸೇರಿ ನಗರದ ಜನನಿಬಿಡ ಪ್ರದೇಶಗಳಲ್ಲಿ ಸಂಚರಿಸಿ ಜನರಿಗೆ ಕೋವಿಡ್ ಮಾರ್ಗಸೂಚಿ ಪಾಲಿಸುವಂತೆ ತಿಳಿಸಿದರು.

ಜಿಲ್ಲಾಧಿಕಾರಿಯ ದಿಢೀರ್ ಕಾರ್ಯಾಚರಣೆಯಿಂದ ಮಾಸ್ಕ್ ಧರಿಸದವರು ಗಲಿಬಿಲಿಗೊಂಡರು. ಈ ಸಂದರ್ಭ ಮಾಸ್ಕ್ ಧರಿಸದ ಸಾರ್ವಜನಿಕರಿಂದ ಸ್ಥಳದಲ್ಲಿಯೇ ದಂಡ ವಸೂಲಿ ಕೂಡ ಮಾಡಲಾಯಿತು.