Connect with us

LATEST NEWS

ಪಾಂಡೇಶ್ವರ ಶೀ ಮಹಾಲಿಂಗೇಶ್ವರ ದೇವಸ್ಥಾನ ಬ್ರಹ್ಮಕಲಶೋತ್ಸವವನ್ನು ಸರಳವಾಗಿ ಅಚರಿಸಲು ಜಿಲ್ಲಾಧಿಕಾರಿ ಆದೇಶ

ಮಂಗಳೂರು, ಡಿಸೆಂಬರ್ 24 :- ಮಂಗಳೂರು ತಾಲೂಕಿನ ಪಾಂಡೇಶ್ವರದಲ್ಲಿರುವ ಶೀ ಮಹಾಲಿಂಗೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವವು ಜನವರಿ 3 ರಿಂದ ಜನವರಿ 8 ರವರೆಗೆ ನಡೆಯಲಿದ್ದು, ಕೋವಿಡ್-19 ಹಿನ್ನೆಲೆಯಲ್ಲಿ ಈ ಬಾರಿಯ ಬ್ರಹ್ಮಕಲಶೋತ್ಸವವನ್ನು ಸರ್ಕಾರದ ಕೋವಿಡ್-19 ಮಾರ್ಗಸೂಚಿಗಳನ್ವಯ ಸರಳವಾಗಿ ನೆರವೇರಿಸಲು ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ ಆದೇಶ ಹೊರಡಿಸಿದ್ದಾರೆ.


ಕಾರ್ಯಕ್ರಮದ ಆಯೋಜಕರು ದೇವಸ್ಥಾನದ ಆಡಳಿತಾಧಿಕಾರಿಯವರು ಕಾರ್ಯಕ್ರಮ ನಡೆಯುವಲ್ಲಿ ಸ್ಯಾನಿಟೈಸರ್ ಬಳಕೆ, ಮಾಸ್ಕ್ ಬಳಕೆ, ಸಾಮಾಜಿಕ ಅಂತರ ಪಾಲನೆಗೆ ಕ್ರಮ ಕೈಗೊಳ್ಳಬೇಕು. ಕೊವೀಡ್-19 ಮಾರ್ಗಸೂಚಿಗಳು ಉಲ್ಲಂಘನೆಯಾದಲ್ಲಿ ಕಾರ್ಯಕ್ರಮದ ಆಯೊಜಕರು ಅಥವಾ ದೇವಸ್ಥಾನದ ಆಡಳಿತಾಧಿಕಾರಿಯವರನ್ನು ಹೊಣೆಗಾರರನ್ನಾಗಿ ಮಾಡಲಾಗುವುದು. ಮುಖಗವಸನ್ನು ಧರಿಸದೇ ಇರುವ ಸಾರ್ವಜನಿಕರ ವಿರುದ್ಧ ನಿಯಮಾನುಸಾರ ದಂಡ ವಿಧಿಸಲು ಕ್ರಮ ಕೈಗೊಳ್ಳಲಾಗುವುದು. ದೇವಾಲಯ ಪ್ರವೇಶಕ್ಕೆ ಹಾಗೂ ನಿರ್ಗಮನಕ್ಕೆ ಸೂಕ್ತ ವ್ಯವಸ್ಥೆಗಳನ್ನು ಮಾಡುವುದು ಹಾಗೂ ಸಾಮಾಜಿಕ ಅಂತರವನ್ನು ಪಾಲಿಸಲು ಅಗತ್ಯ ವ್ಯವಸ್ಥೆ ಮಾಡಬೇಕು.

ದೇವಾಲಯದ ಪ್ರವೇಶದಲ್ಲಿ ಹಾಗೂ ನಿರ್ಗಮನದಲ್ಲಿ ಥರ್ಮಲ್ ಸ್ಕ್ರೀನಿಂಗ್ ಹಾಗೂ ಕೈ ತೊಳೆಯುವುದು ಮತ್ತು ಸ್ಯಾನಿಟೈಸರ್‍ಗೆ ಸೂಕ್ತ ವ್ಯವಸ್ಥೆ ಕಲ್ಪಿಸಬೇಕು. ಉತ್ಸವಾಚರಣೆ ಸಂದರ್ಭದಲ್ಲಿ ಸರ್ಕಾರದ ಮಾರ್ಗಸೂಚಿಯಂತೆ ಕಡ್ಡಾಯವಾಗಿ ಹಸಿರು ಪಟಾಕಿಗಳನ್ನು ಮಾತ್ರ ಬಳಸಬೇಕು.

65 ವರ್ಷಕ್ಕಿಂತ ಮೇಲ್ಪಟ್ಟ ವಯೋಮಾನದ ವ್ಯಕ್ತಿಗಳು, ಬಹು ಅಸ್ಥಿತ್ವತೆ ಹೊಂದಿರುವ ವ್ಯಕ್ತಿಗಳು, ಗರ್ಭಿಣಿಯರು ಮತ್ತು ಹತ್ತು ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳು ಅಗತ್ಯ ಮತ್ತು ಆರೋಗ್ಯ ಉದ್ದೇಶಗಳನ್ನು ಹೊರತು ಪಡಿಸಿ ಮನೆಯಲ್ಲಿಯೇ ಇರಬೇಕು.
ಸಾರ್ವಜನಿಕರ ಆರೋಗ್ಯದ ದೃಷ್ಠಿಯಿಂದ ಆರೋಗ್ಯ ಇಲಾಖೆ, ಪೊಲೀಸ್ ಇಲಾಖೆ, ಮಹಾನಗರ ಪಾಲಿಕೆ, ಮಾಲಿನ್ಯ ನಿಯಂತ್ರಣ ಮಂಡಳಿ, ಅಗ್ನಿಶಾಮಕ ಇಲಾಖೆ, ಇತರೆ ಇಲಾಖೆ ಅಥವಾ ಪಾಲಿಕೆ ಅಥವಾ ಪ್ರಾಧಿಕಾರಗಳಿಂದ ಹೊರಡಿಸಲಾದ ಸೂಚನೆ ಹಾಗೂ ಮಾರ್ಗಸೂಚಿಗಳನ್ನು ಸಹ ಕಡ್ಡಾಯವಾಗಿ ಪಾಲಿಸಬೇಕು.

ರಾಷ್ರ್ಟೀಯ ನಿರ್ದೇಶನಗಳನ್ನು ಹಾಗೂ ರಾಜ್ಯ ಸರ್ಕಾರದ ಆದೇಶ ಅಥವಾ ಮಾರ್ಗಸೂಚಿಗಳನ್ನು ಉಲ್ಲಂಘಿಸುವವರ ವಿರುದ್ಧ ವಿಪತ್ತು ನಿರ್ವಹಣಾ ಕಾಯ್ದೆ 2005 ಹಾಗೂ ಭಾರತೀಯ ದಂಡ ಸಂಹಿತೆ ಸೆಕ್ಷನ್ 188 ರ ಅಡಿಯಲ್ಲಿ ಶಿಸ್ತಿನ ಕಾನೂನು ಕ್ರಮ ಮತ್ತು ಅನ್ವಯವಾಗಬಹುದಾದ ಇತರೆ ಕಾನೂನು ಉಪಬಂಧಗಳ ಮೇರೆಗೆ ಕ್ರಮ ಜರುಗಿಸಲಾಗುವುದು. ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.

Share Information
Continue Reading
Advertisement
Click to comment

Leave a Reply

Your email address will not be published. Required fields are marked *