LATEST NEWS
ದಕ್ಷಿಣಕನ್ನಡ ಜಿಲ್ಲೆಯಲ್ಲಿ ರಜೆ ಕುರಿತ ನಕಲಿ ಆದೇಶ: ಎಫ್ಐಆರ್ ದಾಖಲಿಸಲು ಡಿಸಿ ಸೂಚನೆ
ಮಂಗಳೂರು ಜುಲೈ 17: ಮಳೆ ಹಿನ್ನಲೆ ರಜೆ ಘೋಷಿಸಲಾಗಿದೆ ಎಂಬ ಜಿಲ್ಲಾಧಿಕಾರಿಯವರ ನಕಲಿ ಆದೇಶ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಈ ಹಿನ್ನಲೆ ಈ ಬಗ್ಗೆ ಎಫ್.ಐ.ಆರ್. ದಾಖಲಿಸಲು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಆದೇಶಿಸಿದ್ದಾರೆ.
ಜುಲೈ 18 ರಂದು ಶಾಲೆಗಳಿಗೆ ರಜೆ ಘೋಷಿಸಲಾಗಿದೆ ಎಂದು ನಕಲಿ ಆದೇಶವು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದ್ದು, ಈ ಬಗ್ಗೆ ಎಫ್.ಐ.ಆರ್. ದಾಖಲಿಸಲು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಆದೇಶಿಸಿದ್ದಾರೆ. ಈ ಹಿಂದಿನ ಆದೇಶವನ್ನು ಎಡಿಟ್ ಮಾಡಿ, ಜೂನ್ 18 ಎಂದು ತಿದ್ದಲಾಗಿದೆ. ಇದನ್ನು ಸೃಷ್ಟಿಸಿದವರ ಮೇಲೆ ಹಾಗೂ ಸಾಮಾಜಿಕ ಜಾಲತಾಣದಲ್ಲಿ ಹಂಚುವವರ ವಿರುದ್ಧ ಎಫ್.ಐ.ಆರ್. ದಾಖಲಿಸಲು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ