Connect with us

    LATEST NEWS

    ಗಣೇಶ ಹಬ್ಬದ ಸಂದರ್ಭ ಸರಕಾರ ಹೊರಡಿಸಿರುವ ಮಾರ್ಗಸೂಚಿಗಳನ್ನು ಪಾಲಿಸಲು ಸಲಹೆ – ಜಿಲ್ಲಾಧಿಕಾರಿ

    ಮಂಗಳೂರು ಅಗಸ್ಟ್ 27: – ಸರ್ಕಾರ ಹಾಗೂ ರಾಜ್ಯ ಹೈಕೋರ್ಟ್ ಹೊರಡಿಸಿರುವ ಮಾರ್ಗಸೂಚಿಗಳನ್ನು ಪಾಲಿಸಿ ಈ ಬಾರಿಯ ಗಣೇಶ ಹಬ್ಬವನ್ನು ಸಂಭ್ರಮ ಹಾಗೂ ಸಡಗರಿದಂದ ಆಚರಿಸುವಂತೆ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಅವರು ಜಿಲ್ಲೆಯ ಗಣೇಶೋತ್ಸವ ಸಮಿತಿಗಳ ಮುಖಂಡರಿಗೆ ಸಲಹೆ ನೀಡಿದರು. ನಗರದ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿ ಈ ಕುರಿತು ಹಮ್ಮಿಕೊಳ್ಳಲಾಗಿದ್ದ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು.

    ಸಾರ್ವಜನಿಕವಾಗಿ ಗಣೇಶೋತ್ಸವ ಆಚರಿಸುವ ಸಮಿತಿಗಳು ಆಯಾ ವ್ಯಾಪ್ತಿಯ ಪೊಲೀಸ್ ಇಲಾಖೆ, ನಗರ ಸ್ಥಳೀಯ ಸಂಸ್ಥೆಗಳು ಹಾಗೂ ಗ್ರಾಮ ಪಂಚಾಯತ್‍ಗಳಲ್ಲಿ ಅನುಮತಿ ಪಡೆಯಬೇಕು, ಈ ಸಂದರ್ಭದಲ್ಲಿ ಸೌಹಾರ್ದತೆ ಹಾಗೂ ಸಾಮಾಜಿಕ ಸ್ವಾಸ್ಥ್ಯ ಕದಡುವಂತಹ ಬರಹಗಳ ಬ್ಯಾನರ್ ಅಥವಾ ಫ್ಲೆಕ್ಸ್‍ಗಳನ್ನು ಅಳವಡಿಸಬಾರದು, ನಗರ ಸ್ಥಳೀಯ ಸಂಸ್ಥೆಗಳು ಅಥವಾ ಪೊಲೀಸ್ ಇಲಾಖೆಯ ಅನುಮತಿ ಪಡೆದು ಶುಭ ಕೋರುವ ಬ್ಯಾನರ್ ಅಥವಾ ಫ್ಲೆಕ್ಸ್‍ಗಳನ್ನು ಅಳವಡಿಸಿಕೊಳ್ಳಬಹುದಾಗಿದೆ, ಇದೀಗ ಮಳೆಗಾಲವಾದ ಕಾರಣ ಮಳೆ ಹಾಗೂ ಗಾಳಿಗೆ ಹಾನಿಯಾಗದಂತಹ ಪೆಂಡಾಲ್‍ಗಳನ್ನು ಹಾಕಬೇಕು, ಅಲ್ಲಿ ವಿದ್ಯುತ್ ಅವಘಡಗಳಾಗದಂತೆ ಎಚ್ಚರ ವಹಿಸಬೇಕು, ವಿದ್ಯುತ್ ಸಂಪರ್ಕ ಪಡೆಯಲು ತಾತ್ಕಾಲಿಕ ಅನುಮತಿ ಪಡೆಯಬೇಕು, ದೊಡ್ಡ ದೊಡ್ಡ ಗಣೇಶ ಮೂರ್ತಿಗಳನ್ನು ಪ್ರತಿಷ್ಠಾಪಿಸುವ ಸಮಿತಿಗಳು ಕಡ್ಡಾಯವಾಗಿ ಸಿಸಿಟಿವಿಯನ್ನು ಅಳವಡಿಸಿಕೊಳ್ಳಬೇಕು, ಸಾರ್ವಜನಿಕರ ಓಡಾಟಕ್ಕೆ ಅನುಕೂಲವಾಗುವಂತೆ ನೋಡಿಕೊಳ್ಳಬೇಕು, ಆ ಪೆಂಡಾಲ್‍ಗಳಲ್ಲಿ ಯಾವುದೇ ರೀತಿಯ ಅವಘಡಗಳು ಆಗದಂತೆ ಎಚ್ಚರ ವಹಿಸಲು ತಮ್ಮ ಕಾರ್ಯಕರ್ತರನ್ನು ನಿಯೋಜಿಸುವಂತೆ ಅವರು ತಿಳಿಸಿದರು.

    ಧ್ವನಿ ವರ್ಧಕಗಳನ್ನು ಬಳಸುವ ಮುನ್ನ ಸಂಬಂಧಪಟ್ಟವರಿಂದ ಅನುಮತಿ ಪಡೆಯಬೇಕು ಮತ್ತು ನ್ಯಾಯಾಲಯದ ಆದೇಶದಂತೆ ರಾತ್ರಿ ಹತ್ತು ಗಂಟೆಯ ನಂತರ ಧ್ವನಿ ವರ್ಧಕಗಳನ್ನು ಬಳಸಬಾರದು, ವಿದ್ಯುತ್ ಅಲಂಕಾರ, ಬೆಳಕಿನ ವ್ಯವಸ್ಥೆಯಲ್ಲಿ ಯಾವುದೇ ಲೋಪದೋಷಗಳಾಗದಂತೆ ಆಯೋಜಕರು ಗಮನ ಹರಿಸಬೇಕು. ವಿಸರ್ಜನೆ ಮೆರವಣಿಗೆಯಲ್ಲಿ ವಿದ್ಯುತ್ ತಂತಿಗಳು ಅಥವಾ ಕೇಬಲ್‍ಗಳು ಇರದಿರುವ ಬಗ್ಗೆ ಖಚಿತ ಪಡಿಸಿಕೊಂಡ ನಂತರವೇ ಮೆರವಣಿಗೆ ನಡೆಸಬೇಕು ಎಂದು ಮಾಹಿತಿ ನೀಡಿದರು.

    Share Information
    Advertisement
    Click to comment

    Leave a Reply

    Your email address will not be published. Required fields are marked *