LATEST NEWS
ದಕ್ಷಿಣಕನ್ನಡ ಜಿಲ್ಲಾಧಿಕಾರಿ ರಾಜೇಂದ್ರ ಕೆ.ವಿ ವರ್ಗಾವಣೆ….!!

ಮಂಗಳೂರು ಅಕ್ಟೋಬರ್ 21: ಜಿಲ್ಲಾಧಿಕಾರಿ ಡಾ ರಾಜೇಂದ್ರ ಕೆ.ವಿ ಅವರನ್ನು ಮೈಸೂರು ಜಿಲ್ಲಾಧಿಕಾರಿಯಾಗಿ ವರ್ಗಾವಣೆಗೊಳಿಸಿ ಸರ್ಕಾರ ಆದೇಶ ಹೊರಡಿಸಿದೆ.
ಡಾ. ರಾಜೇಂದ್ರ ಕೆ.ವಿ. ಅವರು ಜಿಲ್ಲೆಯ ಪಾಲಿಗೆ ನಿಷ್ಠಾವಂತ ಹಾಗೂ ಪ್ರಾಮಾಣಿಕ ಅಧಿಕಾರಿಯಾಗಿ ಜನರ ಪ್ರೀತಿ ವಿಶ್ವಾಸಗಳಿಸಿದ್ದರು. ಜಿಲ್ಲಾಧಿಕಾರಿ ವಿರುದ್ಧ ಯಾವುದೇ ಅಪಸ್ವರ ಕೇಳಿ ಬಂದಿರಲಿಲ್ಲ. ಸದ್ಯ ದ.ಕ ಜಿಲ್ಲಾ ಪಂಚಾಯತ್ ಸಿ.ಇ.ಒ ಡಾ ಕುಮಾರ್ ಅವರನ್ನು ಜಿಲ್ಲೆಯ ಪ್ರಭಾರ ಜಿಲ್ಲಾಧಿಕಾರಿಯಾಗಿ ನೇಮಕ ಮಾಡಲಾಗಿದೆ.

Continue Reading