Connect with us

    LATEST NEWS

    ಮೆಹಂದಿ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಬಗ್ಗೆ ಉಡುಪಿ ಜಿಲ್ಲಾಧಿಕಾರಿ ಸ್ಪಷ್ಟನೆ

    ಉಡುಪಿ ಎಪ್ರಿಲ್ 24 : ಮಾಸ್ಕ್ ಹಾಕದೇ ಮೆಹಂದಿ ಕಾರ್ಯಕ್ರಮದಲ್ಲಿ ಉಡುಪಿ ಜಿಲ್ಲಾಧಿಕಾರಿ ಭಾಗವಹಿಸಿದ ಬಗ್ಗೆ ಆಕ್ರೋಶ ವ್ಯಕ್ತವಾಗುತ್ತಿದ್ದಂತೆ ಸ್ವತಃ ಜಿಲ್ಲಾಧಿಕಾರಿ ಜಿ. ಜಗದೀಶ್ ಸ್ಪಷ್ಟನೆ ನೀಡಿದ್ದು, ಮೆಹಂದಿ ಸಾರ್ವಜನಿಕ ಕಾರ್ಯಕ್ರಮವಲ್ಲ..ಅಲ್ಲದೆ ಸಾರ್ವಜನಿಕ ಸ್ಥಳ ಅಲ್ಲ ಈ ಹಿನ್ನಲೆ ಮಾಸ್ಕ್ ಕಡ್ಡಾಯವಲ್ಲ ಎಂದು ತಿಳಿಸಿದ್ದಾರೆ.


    ಉಡುಪಿ ಜಿಲ್ಲಾಧಿಕಾರಿಯವರ ಮನೆ ಹತ್ತಿರವೇ ಇರುವ ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕುಮಾರ ಚಂದ್ರ ಅವರ ಮಗಳ ಮೆಹಂದಿ ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಜಿ ಜಗದೀಶ್ ಭಾಗವಹಿಸಿದ್ದರು. ಈ ಸಂದರ್ಭ ಮದುಮಗಳ ಜೊತೆ ಮಾಸ್ಕ್ ಇಲ್ಲದೆ ಪೋಟೊ ತೆಗೆಸಿಕೊಂಡಿದ್ದಾರೆ. ಈ ಪೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿ..ಜನಾಕ್ರೋಶಕ್ಕೆ ಕಾರಣವಾಗಿತ್ತು. ಜನಸಾಮಾನ್ಯರಿಗೊಂದು ನ್ಯಾಯ ಅಧಿಕಾರಿಗಳಿಗೊಂದು ನ್ಯಾಯವೇ ಎಂದು ಜನರು ಪ್ರಶ್ನೆ ಮಾಡಿದ್ದರು.

    ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕುಮಾರ ಚಂದ್ರ ಅವರ ಮಗಳ ಮೆಹಂದಿ ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಜಿ ಜಗದೀಶ್ ಭಾಗವಹಿಸಿದ್ದು ಅದಕ್ಕೆ ಸ್ಪಷ್ಟನೆ ನೀಡಿದ್ದು” ಅದು ಸಾರ್ವಜನಿಕವಾಗಿ ಕಾರ್ಯಕ್ರಮ ಅಲ್ಲ. ಅದು ಮನೆಯಲ್ಲಿ ಮಾಡಿರುವ ಕಾರ್ಯಕ್ರಮ. ಕೇವಲ ನಾಲ್ಕು ಕುಟುಂಬಗಳಿಗೆ ಸೀಮಿತಗೊಳಿಸಿ ವ್ಯವಸ್ಥೆ ಮಾಡಲಾಗಿತ್ತು. ಅಲ್ಲಿ ಕೇವಲ ಕುಟುಂಬಕ್ಕೆ ಹತ್ತಿರವಾಗಿದ್ದವರನ್ನು ಮಾತ್ರ ಆಹ್ವಾನಿಸಲಾಗಿತ್ತು. ಖಾಸಗಿ ಕಾರ್ಯಕ್ರಮದಲ್ಲಿ ಮಾಸ್ಕ್ ಹಾಕಬೇಕಿಲ್ಲ. ನನ್ನ ಮನೆಯ ಪಕ್ಕದಲ್ಲೇ ಕಾರ್ಯಕ್ರಮಿದ್ದದ್ದು. ಹೆಚ್ಚುವರಿ ಜಿಲ್ಲಾ ಪೊಲೀಸ್ ಅಧಿಕಾರಿಯವರ ಮಗಳ ಜೀವನದ ಅತ್ಯಂತ ಖುಷಿಯ ಕ್ಷಣ. ನಾಲ್ಕು ಮನೆಯ ಕುಟುಂಬಸ್ಥರು ಹೆಚ್ಚು ಕಮ್ಮಿ 20 ಮಂದಿ ಅದರಲ್ಲಿ ಭಾಗಿಯಾಗಿದ್ದರು. ನಾನು ಊಟಕ್ಕೂ ನಿಲ್ಲದೆ, ಐದಾರು ನಿಮಿಷವಷ್ಟೇ ಇದ್ದು ಹೊರಟೆ . ಕೇವಲ ಫೋಟೋಕ್ಕಾಗಿ ಮಾತ್ರ ಮಾಸ್ಕನ್ನು ತೆಗೆದು ಹಾಕಿಕೊಂಡಿದ್ದೇನೆ. ಸೀಮಿತ ಅವಧಿ ಮಾತ್ರ ಇದ್ದೆ ಅಷ್ಟೆ, ಎಂದು ಸ್ಪಷ್ಟನೆ ನೀಡಿದ್ದಾರೆ.

     

    Share Information
    Advertisement
    Click to comment

    You must be logged in to post a comment Login

    Leave a Reply