LATEST NEWS
ಮಳೆ ತುರ್ತು ಪರಿಸ್ಥಿತಿಯಲ್ಲಿ ಸ್ಪಂದಿಸದ ಅರಣ್ಯ ಇಲಾಖೆ ಅಧಿಕಾರಿಗಳ ವಿರುದ್ದ ಜಿಲ್ಲಾಧಿಕಾರಿ ಅಸಮಧಾನ
ಮಳೆ ತುರ್ತು ಪರಿಸ್ಥಿತಿಯಲ್ಲಿ ಸ್ಪಂದಿಸದ ಅರಣ್ಯ ಇಲಾಖೆ ಅಧಿಕಾರಿಗಳ ವಿರುದ್ದ ಜಿಲ್ಲಾಧಿಕಾರಿ ಅಸಮಧಾನ
ಉಡುಪಿ ಮೇ 29: ಭಾರಿ ಮಳೆಯಿಂದ ಹಾನಿಗೊಳಗಾದ ಪ್ರದೇಶದಲ್ಲಿ ಸ್ಪಂದಿಸದ ಅರಣ್ಯ ಇಲಾಖೆಯ ಅಧಿಕಾರಿಗಳ ವಿರುದ್ದ ಉಡುಪಿ ಜಿಲ್ಲಾಧಿಕಾರಿ ಪ್ರಿಯಾಂಕ ಮೇರಿ ಫ್ರಾನ್ಸಿಸ್ ಗರಂ ಆದ ಘಟನೆ ನಡೆದಿದೆ.
ನಿನ್ನೆ ರಾತ್ರಿ ಉದ್ಯಾವರದಲ್ಲಿ ಭಾರಿ ಗಾಳಿಯೊಂದಿಗೆ ಸುರಿದ ಮಳೆಗೆ ನೂರಾರು ಮರಗಳು ಧರೆಗುರುಳಿದ್ದು ಪ್ರಮುಖ ರಸ್ತೆಗಳು ಸಂಪೂರ್ಣ ಬ್ಲಾಕ್ ಆಗಿದ್ದರರು ಅರಣ್ಯ ಇಲಾಖೆಯ ಅಧಿಕಾರಿಗಳು ಸ್ಪಂಧಿಸಿದ ಕಾರಣ ಜಿಲ್ಲಾಧಿಕಾರಿ ಅರಣ್ಯ ಇಲಾಖೆಯ ಅಧಿಕಾರಿಗಳ ವಿರುದ್ದ ಅಸಮಧಾನ ವ್ಯಕ್ತಪಡಿಸಿದ್ದಾರೆ.
ಮಳೆಗಾಲದಲ್ಲಿ ಪಾಕೃತಿಕ ವಿಕೋಪ ಸಂದರ್ಭದಲ್ಲಿ ತುರ್ತು ನೆರವಿಗೆ ಅರಣ್ಯ ಇಲಾಖೆಯ ಅಧಿಕಾರಿಗಳು ಸ್ಪಂದಿಸದೇ ಇರುವುದಕ್ಕೆ ಸಾರ್ವಜನಿಕರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಉದ್ಯಾವರ ಪರಿಸರದಲ್ಲಿ ಭಾರಿ ಮಳೆಗೆ ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದ್ದರು , ಅರಣ್ಯ ಅಧಿಕಾರಿಗಳು ತುರ್ತು ಪರಿಸ್ಥಿತಿಯ ಸಂದರ್ಭದಲ್ಲಿ ಸ್ಪಂದಿಸದ ಹಿನ್ನಲೆಯಲ್ಲಿ ಅರಣ್ಯ ಅಧಿಕಾರಿಗಳ ವಿರುದ್ದ ಜಿಲ್ಲಾಧಿಕಾರಿ ಅಸಮಧಾನ ವ್ಯಕ್ತಪಡಿಸಿದ್ದಾರೆ.
ಉಡುಪಿಯ ಉದ್ಯಾವರ, ಪಿತ್ರೋಡಿಯಲ್ಲಿ ನಿನ್ನೆ ರಾತ್ರಿ ಸುರಿದ ಮಳೆಗೆ ಭಾರಿ ಗಾತ್ರದ ಮರಗಳು ಧರೆಗುರುಳಿವೆ. ರಾಷ್ಟ್ರೀಯ ಹೆದ್ದಾರಿಯಲ್ಲಿ ಹಾಕಲಾಗಿದ್ದ 15 ಕ್ಕೂ ಜಾಹಿರಾತು ಹೋರ್ಡಿಂಗ್ ಗಳು ಬಿದ್ದಿವೆ. ಉದ್ಯಾವರ ಪರಿಸರದಲ್ಲಿ ಸುರಿದ ಮಳೆಗೆ ಸುಮಾರು 70 ರಷ್ಟು ವಿಧ್ಯುತ್ ಕಂಬಗಳು ನೆಲಕ್ಕುರುಳಿದ್ದು, ವಿದ್ಯುತ್ ವ್ಯತ್ಯಯ ಉಂಟಾಗಿದೆ. ಮಳೆಯ ಹಿನ್ನಲೆಯಲ್ಲಿ ಉದ್ಯಾವರ ಪರಿಸರದ ಶಾಲೆಗಳಿಗೆ ಇಂದು ರಜೆ ಘೋಷಿಸಲಾಗಿದೆ.