ಬಂಟ್ವಾಳದಲ್ಲಿ ಕಂಟೈನ್ಮೆಂಟ್ ಪ್ರದೇಶಕ್ಕೆ ಜಿಲ್ಲಾಧಿಕಾರಿ ಸಿಂಧೂ ಬಿ ರೂಪೇಶ್ ಭೇಟಿ

ಬಂಟ್ವಾಳ ಎಪ್ರಿಲ್ 22: ದಕ್ಷಿಣ ಕನ್ನಡ ಜಿಲ್ಲೆ ಬಂಟ್ವಾಳದಲ್ಲಿ ಎರಡು ಕೊರೊನಾ ಪ್ರಕರಣಗಳು ಕಂಡು ಬಂದ ಹಿನ್ನೆಲೆಯಲ್ಲಿ ಬಂಟ್ವಾಳದಲ್ಲಿ ವ್ಯಾಪಕ ಕಟ್ಟೆಚ್ಚರ ವಹಿಸಲಾಗಿದೆ.

ಕೊರೊನಾ ಪ್ರಕರಣ ಪತ್ತೆಯಾದ ಬಂಟ್ವಾಳ ಕೆಳಗಿನ ಪೇಟೆಯನ್ನು ಸಂಪೂರ್ಣ ಸೀಲ್ ಡೌನ್ ಮಾಡಲಾಗಿದ್ದು, ಭಾರೀ ಕಟ್ಟೆಚ್ಚರ ವಹಿಸಲಾಗುತ್ತಿದೆ. ಇಂದು ಕೊರೊನಾ ಪತ್ತೆಯಾದ ಪ್ರದೇಶಕ್ಕೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಸಿಂದೂ ರೂಪೇಶ್ ಭೇಟಿ ನೀಡಿ ಪರಿಸ್ಥಿತಿ ಅವಲೋಕಿಸಿದ್ದಾರೆ. ಸ್ಥಳೀಯ ತಹಶೀಲ್ದಾರ್ ಮತ್ತು ಆರೋಗ್ಯ ಅಧಿಕಾರಿಗಳಿಂದ ಮಾಹಿತಿ ಪಡೆದಿದ್ದಾರೆ.

ಪ್ರಸ್ತುತ ಬಂಟ್ವಾಳ ಪಟ್ಟಣದ ಕೆಳಗಿನ ಪೇಟೆಯ ಪ್ರದೇಶದ ರಸ್ತೆಗೆ ಮಣ್ಣು ಸುರಿದು ಬ್ಯಾರಿಕೇಡ್ ಹಾಕಿ ಜಿಲ್ಲಾಡಳಿತ ಸೀಲ್ ಮಾಡಿದೆ. ಜನ ಮನೆಯಿಂದ ಹೊರಬಾರದಂತೆ ಸೂಚಿಸಿದೆ. ಒಟ್ಟಾರೆ ಬೆಳವಣಿಗೆಗಳಿಂದ ಬಂಟ್ವಾಳ ಕೆಳಗಿನ ಪೇಟೆ ಜನರಲ್ಲಿ ಆತಂಕ ಮನೆ ಮಾಡಿದೆ.
ಈ ನಡುವೆ ನಿನ್ನೆ ಕೊರೊನಾ ಪಾಸಿಟವ್ ಬಂದ 67 ರ ವೃದ್ದೆಯ ಅರೋಗ್ಯ ಸ್ಥಿತಿ ಗಂಭೀರಾವಾಗಿದ್ದು ಮಂಗಳೂರಿನ ವೆನ್ಲಾಕ್ ಕೋವಿಡ್ ಆಸ್ಪತ್ರೆಯಲ್ಲಿ ತೀವ್ರಾ ನಿಗಾ ಘಟಕದಲ್ಲಿ ಚಿಕಿತ್ಸೆ ಮುಂದುವರೆಸಲಾಗಿದೆ.

ಅಸ್ತಮಾ ಮತ್ತು ನ್ಯುಮೋನಿಯಾ ಖಾಯಿಲೆಯಿಂದ ಬಳಲುತ್ತಿರುವ ವೃದ್ಧೆಯ ಆರೋಗ್ಯ ಸ್ಥಿತಿ ಮತ್ತಷ್ಟು ಕ್ಷೀಣಗೊಂಡಿರುವ ಹಿನ್ನೆಲೆಯಲ್ಲಿ ವೆಂಟಿಲೇಟರ್ ಅಳವಡಿಸಿ ಚಿಕಿತ್ಸೆ ಮುಂದುವರೆಸಲಾಗಿದೆ ಎಂದು ಜಿಲ್ಲಾಡಳಿತ ಮಾಹಿತಿ ನೀಡಿದೆ.