Connect with us

LATEST NEWS

ಲೋಕಾಯುಕ್ತ ದಾಳಿ ಬೆನ್ನಲ್ಲೆ ಮಂಗಳೂರು ಮಹಾನಗರಪಾಲಿಕೆಗೆ ಜಿಲ್ಲಾಧಿಕಾರಿ ಭೇಟಿ

ಮಂಗಳೂರು ಜೂನ್ 23: ಲೋಕಾಯುಕ್ತ ಅಧಿಕಾರಿಗಳು ಮಂಗಳೂರು ಮಹಾನಗರಪಾಲಿಕೆ ಅವ್ಯವಸ್ಥೆ ಬಗ್ಗೆ ಮಾಹಿತಿ ನೀಡಿದ ಬೆನ್ನಲ್ಲೆ ದಕ್ಷಿಣಕನ್ನಡ ಜಿಲ್ಲಾಧಿಕಾರಿ ದರ್ಶನ್ ಎಚ್ ವಿ ಅವರು ಸೋಮವಾರ ಮಂಗಳೂರು ಮಹಾನಗರಪಾಲಿಕೆ ಕಚೇರಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.


ಪಾಲಿಕೆಯ ವಿವಿಧ ವಿಭಾಗಗಳಿಗೆ ತೆರಳಿ ಪರಿಶೀಲಿಸಿದ ಅವರು ಬಳಿಕ ನಗರಪಾಲಿಕೆಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು. ನಗರದಲ್ಲಿ ಚಾಲನೆಯಲ್ಲಿರುವ ವಿವಿದ ಅಭಿವೃದ್ಧಿ ಕಾಮಗಾರಿಗಳ ಮಾಹಿತಿ ಪಡೆದ ಅವರು, ಪ್ರವಾಹ ನಿಯಂತ್ರಣಕ್ಕೆ ನಡೆದಿರುವ ಕಾಮಗಾರಿಗಳ ಕುರಿತು ಚರ್ಚಿಸಿದರು.

ನಂತರ, ಸ್ಮಾರ್ಟ್ ಸಿಟಿ ಕಚೇರಿಗೆ ಭೇಟಿ ಕೊಟ್ಟು ಇದುವರೆಗೆ ನಡೆದಿರುವ ಯೋಜನೆಗಳ ಮಾಹಿತಿ ಪಡೆದರು. ಈ ಸಂದರ್ಭದಲ್ಲಿ ಮಹಾನಗರಪಾಲಿಕೆ ಆಯುಕ್ತ ರವಿಚಂದ್ರ ನಾಯಕ್. ಸ್ಮಾರ್ಟ್ ಸಿಟಿ ಎಂ ಡಿ ರಾಜು ಮತ್ತಿತರರು ಇದ್ದರು.

Share Information
Continue Reading
Advertisement
Click to comment

Leave a Reply

Your email address will not be published. Required fields are marked *