LATEST NEWS
ಭಾರಿ ಮಳೆ ರೆಡ್ ಅಲರ್ಟ್ ಹಿನ್ನಲೆ ಮೀನುಗಾರರಿಗೆ ಸಮುದ್ರಕ್ಕೆ ಇಳಿಯದಂತೆ ಸೂಚನೆ

ಮಂಗಳೂರು ಮೇ 20: ಕರಾವಳಿಯಲ್ಲಿ ಪೂರ್ವ ಮುಂಗಾರು ಮಳೆ ಅಬ್ಬರ ಜೋರಾಗಿದ್ದು, ಇಂದು ಮತ್ತು ನಾಳೆ ರೆಡ್ ಅಲರ್ಟ್ ಘೋಷಿಸಲಾಗಿದೆ. ಈ ನಡುವೆ ಸಮುದ್ರ ತೀರದಲ್ಲಿ ಭಾರೀ ಗಾಳಿ ಹಾಗೂ ಮಳೆಯಾಗುತ್ತಿರುವ ಹಿನ್ನಲೆ ಮೀನುಗಾರರಿಗೆ ಸಮುದ್ರಕ್ಕೆ ಇಳಿಯದಂತೆ ದಕ್ಷಿಣಕನ್ನಡ ಜಿಲ್ಲಾಡಳಿತ ಸೂಚನೆ ನೀಡಿದೆ.
ದಕ್ಷಿಣ ಕನ್ನಡ ಜಿಲ್ಲಾಧಿಕಾರಿಯ ಆದೇಶದ ಮೇರೆಗೆ ಮೀನುಗಾರಿಕೆ ಇಲಾಖೆ, ಮಂಗಳೂರು ಇವರ ಪ್ರಕಟಣೆಯಂತೆ ಭಾರತೀಯ ಹವಾಮಾನ ಇಲಾಖೆಯ ಮಾಹಿತಿಯಂತೆ ಕರ್ನಾಟಕ ರಾಜ್ಯದ ಕರಾವಳಿಯಲ್ಲಿ ದಿನಾಂಕ: 21-05-2025 ರಿಂದ ದಿನಾಂಕ: 23-05-2025 ವರೆಗೆ ಆರೆಂಜ್ ಮತ್ತು ರೆಡ್ ಅಲರ್ಟ್ ನ ಮುನ್ಸೂಚನೆ ಇರುತ್ತದೆ. ಆದ ಕಾರಣ ಜಿಲ್ಲೆಯಲ್ಲಿ ವ್ಯಾಪಕವಾಗಿ ಮಳೆಯಾಗುವ ಸಾಧ್ಯತೆಯಿದ್ದು ಸಮುದ್ರದಲ್ಲಿ ಜೋರಾಗಿ ಗಾಳಿ ಬೀಸುವುದರಿಂದ ಮೀನುಗಾರರು ಮೀನುಗಾರಿಕೆ ನಡೆಸಲು ಸಮುದ್ರಕ್ಕೆ ತೆರಳದಂತೆ ಹಾಗೂ ಈಗಾಗಲೇ ಸಮುದ್ರಕ್ಕೆ ತೆರಳಿರುವ ಮೀನುಗಾರಿಕಾ ಬೋಟ್ ಗಳು ಕೂಡಲೇ ದಡ ಸೇರುವಂತೆ ಇಲಾಖೆಯ ಪ್ರಕಟಣೆ ತಿಳಿಯಪಡಿಸಿರುತ್ತದೆ.

ಇದನ್ನು ಎಲ್ಲಾ ಮೀನುಗಾರರು ಪಾಲಿಸಬೇಕಾಗಿ ಮಂಗಳೂರು ಟ್ರಾಲ್ ಬೋಟ್ ಮೀನುಗಾರರ ಸಂಘ ತಿಳಿಸಿದೆ.