Connect with us

DAKSHINA KANNADA

ಕಂಬಳಕ್ಕೆ ಸರ್ಕಾರದಿಂದ 1 ಕೋಟಿ ಸಹಾಯಧನ ಘೋಷಿಸಿದ ಡಿಸಿಎಂ ಡಿ.ಕೆ.ಶಿವಕುಮಾರ್..!

ಜಾನಪದ ಕ್ರೀಡೆ ಕಂಬಳ ಕ್ಕೆ ಸರ್ಕಾರದಿಂದ 1 ಕೋಟಿ ಸಹಾಯಧನ ನೀಡಲಾಗುವುದು ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಘೋಷಣೆ ಮಾಡಿದ್ದಾರೆ.
ಬೆಂಗಳೂರು: ಜಾನಪದ ಕ್ರೀಡೆ ಕಂಬಳ ಕ್ಕೆ ಸರ್ಕಾರದಿಂದ 1 ಕೋಟಿ ಸಹಾಯಧನ ನೀಡಲಾಗುವುದು ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಘೋಷಣೆ ಮಾಡಿದ್ದಾರೆ.

ನಗರದ ಅರಮನೆ ಮೈದಾನದಲ್ಲಿ ಬುಧವಾರ ಬೆಳಿಗ್ಗೆ ಬೆಂಗಳೂರು ಕಂಬಳ- ನಮ್ಮ ಕಂಬಳದ ಕರೆ ಪೂಜೆ ನೆರವೇರಿಸಿ ಮಾತನಾಡಿದ ಅವರು 20 ಕಂಬಳಗಳಿಗೆ ತಲಾ 5 ಲಕ್ಷದಂತೆ 1 ಕೋಟಿ ಸಹಾಯಧನವನ್ನು ನೀಡಲಾಗುವುದು. ದೇಸಿ ಹಾಗೂ ಐತಿಹಾಸಿಕವಾದ ಕಂಬಳ ಕ್ರೀಡೆಗೆ ಹೆಚ್ಚಿನ ಸಹಕಾರ ನೀಡಲಾಗುವುದು ಎಂದು ಭರವಸೆ ನೀಡಿದ್ದಾರೆ

ಕಂಬಳಕ್ಕೆ ಸಹಾಯಧನ ಬಿಡುಗಡೆ ವಿಚಾರವಾಗಿ ಮುಖ್ಯಮಂತ್ರಿಗಳು ಹಾಗೂ ಕನ್ನಡ ಸಂಸ್ಕೃತಿ ಇಲಾಖೆಯ ಜತೆ ಚರ್ಚೆ ನಡೆಸಲಾಗುವುದು.

ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಸಮಾಜಗಳ ಸಂಘಟನೆಗೆ ಒಂದು ನೆಲೆ ಬೇಕು ಎಂದು ಶಾಸಕ ಅಶೋಕ್ ರೈ ಮನವಿ ಮಾಡಿದ್ದು, ಎಲ್ಲರೂ ಒಟ್ಟಾಗಿ ಸರ್ಕಾರಕ್ಕೆ ಮನವಿ ಸಲ್ಲಿಸಿ ಎಂದರು.

ಉಳಿಪೆಟ್ಟು ಬೀಳದೆ ಯಾವುದೇ ಶಿಲೆ ಪ್ರತಿಮೆ ಆಗುವುದಿಲ್ಲ. ಭೂಮಿ ಉಳದೆ ಯಾವುದೇ ಬೆಳೆ ಬೆಳೆಯಲು ಆಗುವುದಿಲ್ಲ.

ಅದರಂತೆ ಅರಮನೆ ಮೈದಾನದಲ್ಲಿ ಒಂದಷ್ಟು ಅಭಿವೃದ್ದಿ ಕೆಲಸಗಳನ್ನು ಈ ನೆಪದಲ್ಲಿ ಮಾಡಬೇಕು.

ದಕ್ಷಿಣ ಕನ್ನಡ ಜಿಲ್ಲೆಯಿಂದ ಬಂದಂತಹ ಸದಾನಂದ ಗೌಡರು, ಹ್ಯಾರಿಸ್ ಅವರು ಬೆಂಗಳೂರಿನಲ್ಲಿ ನಾಯಕರಾಗಿ ಬೆಳೆದಿದ್ದಾರೆ.

“ಕರ್ನಾಟಕದ ಕರಾವಳಿ ಭಾಗ ಈ ದೇಶದ ದೊಡ್ಡ ಆಸ್ತಿ. ಉದ್ದಿಮೆ, ಶಿಕ್ಷಣ, ಹೋಟೆಲ್ ಉದ್ಯಮ, ಪ್ರವಾಸೋಧ್ಯಮ, ಬ್ಯಾಂಕಿಂಗ್ ಸೇರಿದಂತೆ ಎಲ್ಲಾ ಕ್ಷೇತ್ರಗಳಲ್ಲಿ ಹೆಸರು ಮಾಡಿದವರು.

ತಮ್ಮ ಸಂಪ್ರದಾಯವನ್ನು ಬೆಂಗಳೂರಿನ ಜನತೆಗೂ ಪರಿಚಯಿಸಲು ಹೊರಟಿರುವ ಶಾಸಕ ಅಶೋಕ್ ರೈ ಅವರ ಕೆಲಸ ಶ್ಲಾಘನೀಯ” ಎಂದು ತಿಳಿಸಿದರು.

ದಕ್ಷಿಣ ಕನ್ನಡದ ಜನರು ಅವರ ಸಂಸ್ಕೃತಿ ಉಳಿಸಿಕೊಳ್ಳಲು ಬದ್ದತೆಯಿಂದ ಇಲ್ಲಿ ಸೇರಿದ್ದಾರೆ ನಮ್ಮ ಕಂಬಳ- ಬೆಂಗಳೂರು ಕಂಬಳಕ್ಕೆ ಹೆಚ್ಚಿನ ಪ್ರೋತ್ಸಾಹವನ್ನು ಸರ್ಕಾರ ನೀಡುತ್ತದೆ.

ನಡೆ ಮುಂದೆ, ನಡೆ ಮುಂದೆ ನುಗ್ಗಿ ನಡೆ ಮುಂದೆ ಎಂದು ಮುನ್ನಡೆಯ ಬೇಕು. ಯಾವುದೇ ಅಡಚಣೆಗಳಿಗೆ ಕುಗ್ಗಬಾರದು ಎಂದರು.

ಸಮಿತಿಯ ಅಧ್ಯಕ್ಷರಾದ ಅಶೋಕ್ ರೈ, ಮಾಜಿ ಮುಖ್ಯಮಂತ್ರಿ, ಮಾಜಿ ಕೇಂದ್ರ ಸಚಿವ ಹಾಗೂ ಸಂಸದ ಡಿ.ವಿ.ಸದಾನಂದ ಗೌಡ, ಮಾಜಿ ಉಪ ಮುಖ್ಯಮಂತ್ರಿ ಹಾಗೂ ಶಾಸಕ ಅಶ್ವಥ್ ನಾರಾಯಣ್, ಶಾಸಕ ಎನ್ ಎ ಹ್ಯಾರಿಸ್,  ಎಸ್‌ಸಿ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಡಾ, ಎಂ ಎನ್ ರಾಜೇಂದ್ರ ಕುಮಾರ್, ಸಂಗೀತ ನಿರ್ದೇಶಕ ಗುರುಕಿರಣ್ ಮತ್ತಿತರ ಗಣ್ಯರು ಉಪಸ್ಥಿತರಿದ್ದರು.

 

 

Share Information
Continue Reading
Advertisement
Click to comment

Leave a Reply

Your email address will not be published. Required fields are marked *