BELTHANGADI
ದಕ್ಷಿಣ ಕನ್ನಡದ ಮೂವರ ಮೃತದೇಹ ತುಮಕೂರು ಕಾರಿನಲ್ಲಿ ಸುಟ್ಟ ಸ್ಥಿತಿಯಲ್ಲಿ ಪತ್ತೆ, ಕೊಲೆ ಶಂಕೆ..!?
ತುಮಕೂರು: ದಕ್ಷಿಣ ಕನ್ನಡ ಮೂವರ ಮೃತ ದೇಹ ತುಮಕೂರಿನ ಕುಚ್ಚಂಗಿ ಕೆರೆಯ ಬಳಿ ಸುಟ್ಟ ಕಾರಿನಲ್ಲಿ ಪತ್ತೆಯಾಗಿದೆ. ಮೃತರನ್ನು ಬೆಳ್ತಂಗಡಿ ತಾಲೂಕಿನ ಟಿ.ಬಿ ಕ್ರಾಸ್ ನಿವಾಸಿ ಆಟೋ ಚಾಲಕ ಸಾಹುಲ್(45) , ಮದ್ದಡ್ಕ ನಿವಾಸಿ ಇಸಾಕ್(56) , ಶಿರ್ಲಾಲ್ ನಿವಾಸಿ ಇಮ್ತಿಯಾಝ್(34) ಎಂದು ಗುರುತಿಸಲಾಗಿದೆ.
ಇಂದು ಸಾರ್ವಜನಿಕರು ಕೆರೆಗೆ ಭೇಟಿ ನೀಡಿದಾಗ ಈ ಘಟನೆ ಬೆಳಕಿಗೆ ಬಂದಿದೆ. ಘಟನೆಗೆ ಸಂಬಂಧಿಸಿದಂತೆ ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳಾದ ಅಶೋಕ್ ಕೆ.ವಿ, ಅಡಿಷನಲ್ ಎಸ್ಪಿ ಮರಿಯಪ್ಪ, ಡಿವೈಎಸ್ಪಿ ಚಂದ್ರಶೇಖರ್ ಸೇರಿದಂತೆ ಹಲವರು ಭೇಟಿ ನೀಡಿದ್ದಾರೆ. ಯಾರೋ ಕೊಲೆ ಬಳಿಕ ಕಾರು ಸಮೇತ ಬೆಂಕಿ ಹಚ್ಚಿ ಹೋಗಿರು ಶಂಕೆ ವ್ಯಕ್ತವಾಗಿದ್ದುಸ್ಥಳಕ್ಕೆ ಶ್ವಾನದಳ, ಎಫ್.ಎಸ್.ಎಲ್ ತಂಡ ಭೇಟಿ ನೀಡಿದೆ. ದಕ್ಷಿಣ ಕನ್ನಡ ಮೂಲದ ರಫಿಕ್ ಎಂಬುವರಿಗೆ ಸೇರಿದ ಕಾರು ಇದಾಗಿದೆ. ಘಟನೆ ಸಂಬಂಧ ಪೊಲೀಸರು ಎಲ್ಲಾ ಆಯಾಮಗಳಲ್ಲೂ ತನಿಖೆ ನಡೆಸುತ್ತಿದ್ದು, ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ ಎಂದು ತಿಳಿದು ಬಂದಿದೆ.
You must be logged in to post a comment Login