BANTWAL
ಪಾಣೆಮಂಗಳೂರು ನೇತ್ರಾವತಿ ನದಿಗೆ ಹಾರಿ ಆತ್ಮಹತ್ಯೆಗೆ ಶರಣಾದ ಪುತ್ತೂರು ನಗರಸಭೆಯ ಸದಸ್ಯ ರಮೇಶ್ ರೈ

ಬಂಟ್ವಾಳ ಜೂನ್ 05: ಪಾಣೆಮಂಗಳೂರು ನೇತ್ರಾವತಿ ನದಿಗೆ ಹಾರಿ ಪುತ್ತೂರು ನಗರಸಭೆಯ ಬಿಜೆಪಿ ಸದಸ್ಯ ರಮೇಶ್ ರೈ ಆತ್ಮಹತ್ಯೆಗೆ ಶರಣಾಗಿದ್ದಾರೆ.
ಇಂದು ಪಾಣೆಮಂಗಳೂರು ನೇತ್ರಾವತಿ ಸೇತುವೆ ರಮೇಶ್ ರೈ ಅವರಿಗೆ ಸೇರಿದ್ದ ಬೈಕ್ ಮತ್ತು ಮೊಬೈಲ್ ಪತ್ತೆಯಾಗಿತ್ತು. ಈ ಹಿನ್ನಲೆ ಅಗ್ನಿಶಾಮಕದಳ, ಪೋಲೀಸ್ ಮತ್ತು ಸ್ಥಳೀಯರು ಹುಡುಕಾಟ ನಡೆಸಿದ್ದಾರೆ. ಪಾಣೆಮಗಳೂರಿನ ಸೇತುವೆ ಬಳಿಯ ನೀರಿನ ಟ್ಯಾಂಕಿಯಲ್ಲಿ ರಮೇಶ್ ರೈ ಅವರ ಮೃತದೇಹ ಪತ್ತೆಯಾಗಿದೆ.

ರಮೇಶ್ ರೈ, ಇತ್ತೀಚಿಗೆ ಉಪ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿ ಆಯ್ಕೆಯಾಗಿದ್ದರು. ಇಂದು ಬೆಳಗ್ಗೆ ಸುಮಾರು 11 ಗಂಟೆಯಿಂದ ಬೈಕ್ ಹಾಗೂ ಸೊತ್ತುಗಳು ಇಲ್ಲಿ ಅನಾಥವಾಗಿ ಕಂಡು ಬಂದಿವೆ ಎಂದು ಸ್ಥಳೀಯರು ಪೋಲೀಸರಿಗೆ ತಿಳಿಸಿದ್ದರು. ಮಾಹಿತಿ ತಿಳಿಯುತ್ತಿದ್ದಂತೆ ಪುತ್ತೂರಿನಿಂದ ಬಿಜೆಪಿ ಪಕ್ಷದ ಮುಖಂಡರು ಮತ್ತು ಸಂಬಂಧಿಕರು ಘಟನೆ ನಡೆದ ಸ್ಥಳಕ್ಕೆ ಆಗಮಿಸಿದ್ದಾರೆ. ಮಾಜಿ ಶಾಸಕ ಸಂಜೀವ ಮಠಂದೂರು, ಅರುಣ್ ಕುಮಾರ್ ಪುತ್ತಿಲ ಸ್ಥಳಕ್ಕೆ ಭೇಟಿ ನೀಡಿದ್ದಾರೆ.