ಮಂಗಳೂರು, ಎಪ್ರಿಲ್ 9: ಗುರುಪುರ ಸೇತುವೆಯಿಂದ ನದಿಗೆ ಹಾರಿ ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿದ್ದ ಯುವಕನ ಮೃತದೇಹ ಪತ್ತೆಯಾಗಿದೆ.

ಮೃತರನ್ನು ಕಜೆ ಪಡ್ಡಾಯಿಬೆಟ್ಟು ನಿವಾಸಿ ಕೌಶಿಕ್ ಬೆಲ್ಚಡ (30) ಎಂದು ಗುರುತಿಸಲಾಗಿದೆ. ಬುಧವಾರ ಸಂಜೆ 6:30ಕ್ಕೆ ಗುರುಪುರದತ್ತ ಸ್ಕೂಟರ್ ನಲ್ಲಿ ಆಗಮಿಸಿದ್ದ ಕೌಶಿಕ್ ಫಲ್ಗುಣಿ ಸೇತುವೆ ಮೇಲೆ ಸ್ಕೂಟರ್ ನಿಲ್ಲಿಸಿ ನದಿಗೆ ಹಾರಿದ್ದರು ಎನ್ನಲಾಗಿದೆ. ಕತ್ತಲಾದ ಕಾರಣ ಬುಧವಾರ ಕಾರ್ಯಾಚರಣೆ ನಡೆಸಲು ಸಾಧ್ಯವಾಗಿರಲಿಲ್ಲ.
ಇಂದು ಮಂಗಳೂರು ಅಗ್ನಿಶಾಮಕ ದಳದ ಸಿಬ್ಬಂದಿಯು ಕೌಶಿಕ್ಗಾಗಿ ಹುಡುಕಾಟ ಆರಂಭಿಸಿದ್ದರು. ಪಾಣೆಮಂಗಳೂರಿನ ಮುಳುಗು ತಜ್ಞರು ಕೂಡ ಆಗಮಿಸಿ ಸೇತುವೆ ಕಂಬಗಳ ಬಳಿ ಕಾರ್ಯಾಚರಣೆ ನಡೆಸಿ ಮೃತದೇಹವನ್ನು ಪತ್ತೆಹಚ್ಚಿದ್ದಾರೆ. ಬಜ್ಪೆ ಪೊಲೀಸರು ಸ್ಕೂಟರ್ ವಶಕ್ಕೆ ಪಡೆದು ಪ್ರಕರಣ ದಾಖಲಿಸಿ ತನಿಖೆ ನಡೆಸಿದ್ದಾರೆ