LATEST NEWS
ಕೊಳೆತ ಸ್ಥಿತಿಯಲ್ಲಿ ಶವ ಪತ್ತೆ: ಆತ್ಮಹತ್ಯೆ ಶಂಕೆ

ಉಡುಪಿ ಜನವರಿ 15: 76 ಬಡಗುಬೆಟ್ಟಿನಲ್ಲಿ ವ್ಯಕ್ತಿಯೊರ್ವರ ಶವವು, ಹಳೆ ಮನೆಯ ಜಂತಿಗೆ ನೇಣುಬಿಗಿದ ಸ್ಥಿತಿಯಲ್ಲಿ ಗುರುವಾರ ರಾತ್ರಿ ಕಂಡುಬಂದಿದೆ. ಶವವು ಗುರುತು ಹಿಡಿಯಲಾಗದಷ್ಟು ಕೊಳೆತು ಹೋಗಿದ್ದು, ವ್ಯಕ್ತಿ ಮೃತಪಟ್ಟು ನಾಲ್ಕು ದಿನಗಳು ಕಳೆದಿರಬಹುದು, ಆತ್ಮಹತ್ಯೆ ಎಂದು ಶಂಕಿಸಲಾಗಿದೆ. ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮೃತ ವ್ಯಕ್ತಿಯನ್ನು ಸುರೇಶ್ ಶೆಟ್ಟಿ (52 ) ತಂದೆ ಗೋಪಾಲ ಶೆಟ್ಟಿ ಎಂದು ಗುರುತಿಸಲಾಗಿದೆ. ಕಳೇಬರವನ್ನು ವೈದ್ಯಕೀಯ ಪರೀಕ್ಷೆಗಾಗಿ, ಜಿಲ್ಲಾಸ್ಪತ್ರೆಯ ಶವಗಾರಕ್ಕೆ ಸಾಗಿಸಲು ಉಚಿತ ಅಂಬುಲೇನ್ಸ್ ಸೇವೆಯನ್ನು ಒದಗಿಸಿ, ಸಮಾಜಸೇವಕ ನಿತ್ಯಾನಂದ ಒಳಕಾಡು ಅವರು ಇಲಾಖೆಗೆ ಸಹಕರಿಸಿದರು.
