Connect with us

    DAKSHINA KANNADA

    ಪುತ್ತೂರು – ಮಾನವೀಯತೆ ಮರೆತು ಮೃತಪಟ್ಟ ಕಾರ್ಮಿಕನ ಮೃತದೇಹವನ್ನು ರಸ್ತೆ ಬದಿಯಲ್ಲಿ ಇಟ್ಟ ಹೋದ ಸಂಗಡಿಗರು

    ಪುತ್ತೂರು ನವೆಂಬರ್ 17: ಜೊತೆಯಾಗಿ ಕೆಲಸ ನಿರ್ವಹಿಸುತ್ತಿರುವ ವೇಳೆ ಮೃತಪಟ್ಟ ಕಾರ್ಮಿಕನೊಬ್ಬನ ಮೃತದೇಹವನ್ನು ಮೃತದೇಹವನ್ನು ಪಿಕಪ್ ವಾಹನದಲ್ಲಿ ತಂದು ಅವರ ಮನೆಯ ಸಮೀಪದ ರಸ್ತೆ ಬದಿಯಲ್ಲಿ ಇಟ್ಟುಹೋದ ಘಟನೆ ಪುತ್ತೂರು ನಗರದ ಹೊರವಲಯದ ಚಿಕ್ಕಮುಳ್ಳೂರು ಗ್ರಾಮದ ಸಾಲ್ಮರ ಎಂಬಲ್ಲಿ ಶನಿವಾರ ನಡೆದಿದೆ.


    ಮೇಸ್ತ್ರಿಯೊಂದಿಗೆ ಕೆಲಸ ಮಾಡುತ್ತಿದ್ದ ಶಿವಪ್ಪ (70) ಮೃತಪಟ್ಟವರು. ‘ಸಾರಣೆ ಕೆಲಸಕ್ಕೆಂದು ಕರೆದುಕೊಂಡು ಹೋದವರು ಪಿಕಪ್ ವಾಹನದಲ್ಲಿ ತಂದು ಮನೆಯ ಸಮೀಪದ ರಸ್ತೆಯಲ್ಲಿ ಶವ ಇಟ್ಟು ಹೋಗಿದ್ದಾರೆ. ನಾವು ನೋಡುವಾಗ ಮೃತಪಟ್ಟಿರುವುದು ಗೊತ್ತಾಗಿದೆ. ಅನಾರೋಗ್ಯಕ್ಕೊಳ ಗಾಗಿದ್ದರೆ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಚಿಕಿತ್ಸೆ ಕೊಡಿಸಬೇಕಾಗಿತ್ತು. ಮೃತಪಟ್ಟಿದ್ದರೆ ಸರಿಯಾದ ರೀತಿಯಲ್ಲಿ ನಡೆದುಕೊಳ್ಳಬೇಕಿತ್ತು. ಈ ರೀತಿ ಮಾಡಿರುವುದು ಎಷ್ಟು ಸರಿ’ ಎಂದು ಶಿವಪ್ಪ ಅವರ ಕುಟುಂಬದವರು ಆಕ್ರೋಶ ವ್ಯಕ್ತಪಡಿಸಿದರು. ಕಾಮಗಾರಿ ನಡೆಸುತ್ತಿದ್ದ ಮಾಲೀಕನ ವಿರುದ್ಧ ಕಾನೂನು ಕ್ರಮಕೈಗೊಳ್ಳಬೇಕು ಎಂದು ಮೃತನ ಕುಟುಂಬದವರು ಹಾಗೂ ಸ್ಥಳೀಯರು ಆಗ್ರಹಿಸಿದ್ದಾರೆ. ಸ್ಥಳಕ್ಕೆ ಪೊಲೀಸರು ಆಗಮಿಸಿ ವಿಚಾರಣೆ ನಡೆಸಿದ್ದಾರೆ.

    Share Information
    Advertisement
    Click to comment

    Leave a Reply

    Your email address will not be published. Required fields are marked *