Connect with us

BELTHANGADI

ಗ್ರಾಂ.ಪ. ಪಂಪ್ ಅಪರೇಟರ್ ಮೇಲೆ ಮಾರಣಾಂತಿಕ ಹಲ್ಲೆ

ಬೆಳ್ತಂಗಡಿ.ಡಿಸೆಂಬರ್ 16 :ಗ್ರಾಮ ಪಂಚಾಯತ್ ಪಂಪ್ ಅಪರೇಟರ್ ಮೆಲೆ ಮಾರಣಾಂತಿಕ ಹಲ್ಲೆ ನಡೆದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯಲ್ಲಿ ನಡೆದಿದೆ.

ನೀರು ಪೂರೈಕೆ ಸಮರ್ಪಕವಾಗಿ ಮಾಡುವುದಿಲ್ಲ ಎಂಬ ಹಿನ್ನೆಲೆಯಲ್ಲಿ ಇಲ್ಲಿನ ಅಳದಂಗಡಿಯಲ್ಲಿ ಈ ಹಲ್ಲೆ ನಡೆಸಲಾಗಿದೆ.

ಹಲ್ಲೆಗೊಳಗಾಗಿ ಗಾಯಗೊಂಡ ಪಂಪ್ ಅಪರೇಟರ್ ಕೃಷ್ಣ ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

ಮುರಳಿ ಎಂಬವರು ನಿನ್ನೆ ರಾತ್ರಿ ಕೃಷ್ಣ ಅವರನ್ನು ಮನೆಗೆ ಕರೆಸಿಕೊಂಡು ಹಲ್ಲೆ ನಡೆಸಿದ್ದಾರೆ ಎಂದು ಅರೋಪಿಸಲಾಗಿದೆ.

ವೇಣೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೋಲಿಸರು ತನಿಖೆ ನಡೆಸುತ್ತಿದ್ದಾರೆ.

Facebook Comments

comments