Connect with us

KARNATAKA

ಶತಾಯುಷಿ ಸ್ವಾತಂತ್ರ್ಯ ಹೋರಾಟಗಾರ ಎಚ್ ಎಸ್ ದೊರೆಸ್ವಾಮಿ ನಿಧನ

ಬೆಂಗಳೂರು, ಮೇ 26: ಸ್ವಾತಂತ್ರ್ಯ ಹೋರಾಟಗಾರ ಶತಾಯುಷಿ (104) ಎಚ್ ಎಸ್ ದೊರೆಸ್ವಾಮಿ ಹೃದಯಾಘಾತದಿಂದ ಇಂದು ನಿಧನರಾಗಿದ್ದಾರೆ.

ವಿವಿಧ ಸಾಮಾಜಿಕ ಚಟುವಟಿಕೆಗಳಲ್ಲಿ ಸಕ್ರಿಯರಾಗಿದ್ದ ಸ್ವಾತಂತ್ರ್ಯ ಹೋರಾಟಗಾರ ಎಚ್ ಎಸ್ ದೊರೆಸ್ವಾಮಿ ಕನಕಪುರದ ಹಾರೋಹಳ್ಳಿಯಲ್ಲಿ  ಜನಿಸಿದ್ದರು, ಇವರು ಹಲವು ಭೂಕಬಳಿಕೆ ವಿರುದ್ಧ ಹೋರಾಟ ನಡೆಸಿದ್ದರು. ಪತ್ರಿಕೋದ್ಯಮದಲ್ಲಿ ದೊರೆಸ್ವಾಮಿ ತನ್ನದೇ ಛಾಪು ಮೂಡಿಸಿದ್ದರು.

ಕೆಲ ದಿನಗಳ ಹಿಂದೆ ಕೊರೊನಾ ಸೋಂಕಿನಿಂದ ಬಳಲುತ್ತಿದ್ದರು ಚಿಕಿತ್ಸೆ ಬಳಿಕ ಅವರ ಆರೋಗ್ಯದಲ್ಲಿ ಚೇತರಿಕೆ ಕಂಡಿತ್ತು, ಬಳಿಕ ಮತ್ತೆ ಅಸ್ವಸ್ಥಗೊಂಡ ಅವರನ್ನು ಜಯದೇವ ಹೃದ್ರೋಗ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಆದರೆ ಚಿಕಿತ್ಸೆಗೆ ಸ್ಪಂದಿಸದ ಅವರು ಬುಧವಾರ ನಿಧನರಾದರು. ಕಳೆದ ತಿಂಗಳಲ್ಲಷ್ಟೇ 104ನೇ ವರ್ಷದ ಜನ್ಮದಿನವನ್ನು ಆಚರಿಸಿಕೊಂಡಿದ್ದರು.