Connect with us

    LATEST NEWS

    ದಕ್ಷಿಣಕನ್ನಡ ಜಿಲ್ಲಾಧಿಕಾರಿಗೆ ಜೀವ ಬೆದರಿಕೆ – ಮಿಜಾರಿನ ಯುವಕನ ಬಂಧನ

    ಮಂಗಳೂರು : ದಕ್ಷಿಣಕನ್ನಡ ಜಿಲ್ಲಾಧಿಕಾರಿಯಾಗಿದ್ದ ಸಿಂಧೂ ಬಿ ರೂಪೇಶ್ ಅವರಿಗೆ ಸಾಮಾಜಿಕ ಜಾಲತಾಣದಲ್ಲಿ ಕೊಲೆ ಬೆದರಿಕೆ ಹಾಕಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಒರ್ವ ಆರೋಪಿಯನ್ನು ಬಂಧಿಸಲಾಗಿದೆ.


    ಬಂಧಿತನನ್ನು ಮಿಜಾರಿನ ನಿವಾಸಿ ರಂಜಿತ್ (20) ಎಂದು ಗುರುತಿಸಲಾಗಿದೆ. ಜುಲೈ 28 ರ ಸೋಮವಾರದಂದು ಗೋ ಸಾಗಾಟದ ನಿಯಮಗಳ ಬಗ್ಗೆ ಜಿಲ್ಲಾಧಿಕಾರಿ ಸೂಚನೆ ನೀಡಿದ ಹಿನ್ನಲೆಯಲ್ಲಿ ವಾಟ್ಸ್ ಗ್ರೂಪ್ ಒಂದರಲ್ಲಿ ನಿಂದಿಸಿ ಕೊಲೆ ಬೆದರಿಕೆಯೊಡ್ಡಿರುವ ಬಗ್ಗೆ ವರದಿಯಾಗಿತ್ತು. ಈ ಕುರಿತು ಜಿಲ್ಲಾಧಿಕಾರಿ ದೂರು ನೀಡಿಲ್ಲದಿದ್ದರೂ ಪೊಲೀಸ್ ಇಲಾಖೆಯೆ ಸ್ವಯಂ ಪ್ರೇರಿತ ದೂರು ದಾಖಲಿಸಿ ತನಿಖೆ ನಡೆಸಿತ್ತು. ಇದೀಗ ಆರೋಪಿಯನ್ನು ಬಂಧಿಸಲಾಗಿದೆ.

    Share Information
    Advertisement
    Click to comment

    Leave a Reply

    Your email address will not be published. Required fields are marked *