Connect with us

LATEST NEWS

ಸಾಮಾಜಿಕ ಜಾಲತಾಣದಲ್ಲಿ ದಕ್ಷಿಣಕನ್ನಡ ಜಿಲ್ಲಾಧಿಕಾರಿಗೆ ಜೀವ ಬೇದರಿಕೆ

ಮಂಗಳೂರು, ಜುಲೈ 28: ಜಾನುವಾರು ಸಾಗಾಟಗಾರರ ಮೇಲೆ ನಡೆಸಲಾಗುತ್ತಿರುವ ಹಲ್ಲೆಗಳನ್ನು ಉಲ್ಲೇಖಿಸಿ ಕಾನೂನು ಕ್ರಮದ ಎಚ್ಚರಿಕೆ ನೀಡಿದ್ದ ಜಿಲ್ಲಾಧಿಕಾರಿಯವರ ಹೇಳಿಕೆಯ ಬೆನ್ನಲ್ಲೆ ದ.ಕ. ಜಿಲ್ಲಾಧಿಕಾರಿ ಸಿಂಧೂ ಬಿ. ರೂಪೇಶ್‌ರವರಿಗೆ ವಾಟ್ಸಾಪ್ ಗ್ರೂಪ್‌ವೊಂದರಲ್ಲಿ ವ್ಯಕ್ತಿಯೊಬ್ಬ ಕೊಲೆ ಬೆದರಿಕೆ ಹಾಕಿರುವ ಸ್ಕ್ರೀನ್ ಶಾಟ್ ಈಗ ವೈರಲ್ ಆಗಿದೆ.


ಜಿಲ್ಲೆಯಲ್ಲಿ ಜಾನುವಾರು ಸಾಗಣೆದಾರರ ಮೇಲೆ ನಡೆಯುತ್ತಿರುವ ದಾಳಿಯ ಬಗ್ಗೆ ಮಾತನಾಡಿ ಹಲ್ಲೆ ನಡೆಸಿದವರ ಮೇಲೆ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಎಚ್ಚರಿಕೆ ನೀಡಿದ್ದು ಇದರ ಬಗ್ಗೆ ವಾಟ್ಸಾಪ್ ಗುಂಪಿನಲ್ಲಿ ಚರ್ಚೆ ನಡೆದಿದ್ದು ಈ ಸಂದರ್ಭದಲ್ಲಿ ವ್ಯಕ್ತಿಯೋರ್ವ ತುಳು ಭಾಷೆಯಲ್ಲಿ ಕೊಲೆ ಬೆದರಿಕೆ ಹಾಕಿದ್ದು ”ನಮ್ಮ ಹಿಂದುತ್ವಕ್ಕಾಗಲಿ, ಅಥವಾ ದೇವರಿಗಾಗಲಿ ಯಾರಾದರೂ ಧಕ್ಕೆ ಮಾಡುವ ಕೆಲಸ ಮಾಡಿದ್ದಲ್ಲಿ ಅವರ ಪ್ರಾಣ ತೆಗೆಯಲೂ ರೆಡಿ ಪ್ರಾಣ ನೀಡಲೂ ಸಿದ್ಧ” ಎಂಬುದಾಗಿಯೂ ತುಳುವಿನಲ್ಲಿ ಆ ವ್ಯಕ್ತಿ ಬೆದರಿ ಹಾಕಿದ್ದಾನೆ.


ಇನ್ನು ಈ ಬಗ್ಗೆ ಟ್ವೀಟ್‌ ಮಾಡಿರುವ ಜಿಲ್ಲಾಡಳಿತ, ಸಾಮಾಜಿಕ ಜಾಲತಾಣಗಳಲ್ಲಿ ಜಾನುವಾರು ಸಾಗಾಣಿಕೆಗೆ ಸಂಬಂಧಿಸಿದಂತೆ ಅನೇಕರು ಗೊಂದಲ ಉಂಟು ಮಾಡುತ್ತಿರುವುದು ಕಂಡುಬಂದಿರುತ್ತದೆ. ಯಾವುದೇ ಅಕ್ರಮ ಜಾನುವಾರು ಸಾಗಾಣಿಕೆ ಕಂಡುಬಂದಲ್ಲಿ ಪೊಲೀಸರಿಂದ ಕಾನೂನು ಕ್ರಮ ಕೈಗೊಳ್ಳಲಾಗುವುದು. ಸಾರ್ವಜನಿಕರು ವದಂತಿಗಳಿಗೆ ಕಿವಿಗೊಡಬಾರದು ಎಂದು ಕೋರಿದೆ.


ಉಪ ಪೊಲೀಸ್ ಆಯುಕ್ತ (ಕಾನೂನು ಮತ್ತು ಸುವ್ಯವಸ್ಥೆ) ಅರುಣಾಂಗ್ಶು ಗಿರಿ, ಕೊಲೆ ಬೆದರಿಕೆ ಬಗ್ಗೆ ಇಲಾಖೆಯ ಗಮನಕ್ಕೆ ಬಂದಿದ್ದು ಈಗಾಗಲೇ ತನಿಖೆ ಆರಂಭಿಸಲಾಗಿದೆ. ಜಿಲ್ಲಾಧಿಕಾರಿ ಅವರೊಂದಿಗೆ ಮಾತನಾಡಿದ್ದೇನೆ ಎಂದು ತಿಳಿಸಿದ್ದಾರೆ. ಜಿಲ್ಲಾಧಿಕಾರಿ ದೂರು ನೀಡಿದ್ದಲ್ಲಿ ಸ್ವೀಕರಿಸಲಾಗುವುದು. ಇಲ್ಲವಾದಲ್ಲಿ ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಲಾಗುವುದು, ಯಾವುದೇ ಕಾರಣಕ್ಕೂ ಇದನ್ನು ನಿರ್ಲಕ್ಷಿಸುವುದಿಲ್ಲ ಎಂದಿದ್ದಾರೆ.

Facebook Comments

comments