Connect with us

LATEST NEWS

ತೆಲಂಗಾಣ ಔಷಧ ಘಟಕದಲ್ಲಿ ಸ್ಪೋಟ – ಸಾವಿನ ಸಂಖ್ಯೆ 35ಕ್ಕೆ ಏರಿಕೆ

ಹೈದರಾಬಾದ್ ಜುಲೈ 01: ತೆಲಂಗಾಣದ ಸಿಗಾಚಿ ಇಂಡಸ್ಟ್ರೀಸ್‌ನ ಪಾಶಮೈಲಾರಂನಲ್ಲಿರುವ ಔಷಧ ಘಟಕದಲ್ಲಿ ಸಂಭವಿಸಿದ ಸ್ಫೋಟದಲ್ಲಿ ಸಾವನ್ನಪ್ಪಿದವರ ಸಂಖ್ಯೆ 35 ಕ್ಕೆ ಏರಿಕೆಯಾಗಿದ್ದು, ಸಾವಿನ ಸಂಖ್ಯೆ ಮತ್ತಷ್ಟು ಏರಿಕೆಯಾಗುವ ಸಾಧ್ಯತೆ ಇದೆ ಎಂದು ವರದಿಯಾಗಿದ್ದು. ಮಾಹಿತಿ ಪ್ರಕಾರ 50ಕ್ಕೂ ಅಧಿಕ ಮಂದಿ ಸಾವನಪ್ಪಿರುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.


ಪಾಶಮೈಲಾರಂ ಕೈಗಾರಿಕಾ ಪ್ರದೇಶದಲ್ಲಿರುವ ಸಿಗಾಚಿ ಫಾರ್ಮಾ ಕಂಪನಿಯ ರಿಯಾಕ್ಟರ್‌ನಲ್ಲಿ ರಾಸಾಯನಿಕ ವಸ್ತುವಿಗೆ ಬೆಂಕಿ ಹೊತ್ತಿಕೊಂಡು ಸ್ಫೋಟ ಸಂಭವಿಸಿದೆ ಎಂದು ಮೂಲಗಳು ಹೇಳಿವೆ. ಆದರೆ, ಸ್ಫೋಟಕ್ಕೆ ನಿಖರ ಕಾರಣ ಸಮಗ್ರ ಪರಿಶೀಲನೆಯ ಬಳಿಕವೇ ತಿಳಿಯಲಿದೆ ಎಂದು ತಾಂತ್ರಿಕ ತಜ್ಞರು ತಿಳಿಸಿದ್ದಾರೆ.


ಅವಶೇಷಗಳಿಂದ 31 ಶವಗಳನ್ನು ಹೊರತೆಗೆಯಲಾಗಿದೆ ಮತ್ತು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವಾಗ ಮೂವರು ಸಾವನ್ನಪ್ಪಿದ್ದಾರೆ” ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪರಿತೋಷ್ ಪಂಕಜ್ ಪಿಟಿಐಗೆ ತಿಳಿಸಿದ್ದಾರೆ. ರಕ್ಷಣಾ ಕಾರ್ಯಾಚರಣೆಯ ಅಂತಿಮ ಹಂತ ಇನ್ನೂ ನಡೆಯುತ್ತಿದೆ ಎಂದು ಅವರು ಹೇಳಿದರು. ಮುಖ್ಯಮಂತ್ರಿ ಎ ರೇವಂತ್ ರೆಡ್ಡಿ ಮಂಗಳವಾರ ಬೆಳಿಗ್ಗೆ ಅಪಘಾತ ಸ್ಥಳಕ್ಕೆ ಭೇಟಿ ನೀಡುವ ನಿರೀಕ್ಷೆಯಿದೆ.
ತೆಲಂಗಾಣ ರಾಸಾಯನಿಕ ಕಾರ್ಖಾನೆ ಸ್ಫೋಟದಲ್ಲಿ ಮೃತಪಟ್ಟ ಕನಿಷ್ಠ ಎಂಟು ಜನರ ಕುಟುಂಬಗಳಿಗೆ ತಲಾ ಎರಡು ಲಕ್ಷ ರೂಪಾಯಿಗಳನ್ನು ಪರಿಹಾರವಾಗಿ ನೀಡುವುದಾಗಿ ಪ್ರಧಾನಿ ನರೇಂದ್ರ ಮೋದಿ ಘೋಷಿಸಿದರು. ಗಾಯಗೊಂಡ ಸುಮಾರು ಹನ್ನೆರಡು ಜನರಿಗೆ ಐವತ್ತು ಸಾವಿರ ರೂಪಾಯಿಗಳನ್ನು ನೀಡಲಾಗುವುದು ಎಂದು ಅವರು ಹೇಳಿದರು.

ಸೋಮವಾರ ಬೆಳಿಗ್ಗೆ 9.28ರಿಂದ 9.35ರ ನಡುವೆ ಸ್ಫೋಟ ಸಂಭವಿಸಿತ್ತು. ಈ ವೇಳೆ ಕಾರ್ಖಾನೆಯಲ್ಲಿ 150 ಮಂದಿ ಕೆಲಸ ಮಾಡುತ್ತಿದ್ದರು. ಅದರಲ್ಲಿ ಸುಮಾರು 90 ಮಂದಿ ಸ್ಫೋಟ ನಡೆದ ಸ್ಥಳದ ಸಮೀಪದಲ್ಲೇ ಇದ್ದರು ಎಂದು ಕಾರ್ಖಾನೆಯ ಮೂಲಗಳನ್ನು ಉಲ್ಲೇಖಿಸಿ ಐಜಿಪಿ ವಿ.ಸತ್ಯನಾರಾಯಣ ಹೇಳಿದ್ದರು. ಸತ್ತವರಲ್ಲಿ ಕೆಲವರ ಮೃತದೇಹ ಸಂಪೂರ್ಣ ಸುಟ್ಟುಹೋಗಿದ್ದು, ಗುರುತು ಪತ್ತೆಹಚ್ಚಲು ಡಿಎನ್ಎ ಪರೀಕ್ಷೆ ನಡೆಸಲಾಗುವುದು ಎಂದಿದ್ದಾರೆ.

Share Information
Continue Reading
Advertisement
Click to comment

Leave a Reply

Your email address will not be published. Required fields are marked *