Connect with us

LATEST NEWS

ವಯನಾಡ್ ಭೂಕುಸಿತ- ಕ್ಷಣಕ್ಷಣಕ್ಕೂ ಏರಿಕೆಯಾಗುತ್ತಿರುವ ಸಾವಿನ ಸಂಖ್ಯೆ

ವಯನಾಡ್ ಜುಲೈ 31: ಕೇರಳದ ವಯನಾಡ್ ನಲ್ಲಿ ನಿನ್ನೆ ಸಂಭವಿಸಿದ ಭೂಕುಸಿತಕ್ಕೆ ಸಾವನಪ್ಪಿದವರ ಸಂಖ್ಯೆ 156ಕ್ಕೆ ಏರಿಕೆಯಾಗಿದೆ. ಇನ್ನೂ ನೂರಾರು ಮಂದಿ ಮಣ್ಣಿನ ಅವಶೇಷಗಳ ಅಡಿ ಸಿಲುಕಿರುವ ಸಾಧ್ಯತೆ ಇದೆ ಎಂದು ಹೇಳಲಾಗಿದ್ದು, ಇದೀಗ ಕೇರಳ ಸರಕಾರ ಭೂಕುಸಿತವಾದ ಪ್ರದೇಶಗಳಲ್ಲಿದ್ದ ಜನರ ಮಾಹಿತಿಯನ್ನು ಕಲೆಹಾಕುತ್ತಿದೆ.


ವಯನಾಡ್ ನಲ್ಲಿ ನಡೆದ ಭೀಕರ ದುರಂತದಿಂದಾಗಿ ಜಿಲ್ಲೆಯ ಮೇಪ್ಪಾಡಿ ಪಟ್ಟಣ ವ್ಯಾಪ್ತಿಯ ಮುಂಡಕ್ಕೈ, ಚೂರಲ್‌ಮಲ, ಅಟ್ಟಮಲ ಹಾಗೂ ಸಮೀಪದ ನೂಲ್ಪುಳ ಗ್ರಾಮಗಳು ಅಕ್ಷರಶಃ ಕೊಚ್ಚಿಹೋಗಿವೆ. ಘಟನೆಯಲ್ಲಿ 130ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.


ಮಲಪ್ಪುರಂ ಜಿಲ್ಲೆಯ ನಿಲಂಬೂರ್ ಬಳಿಯ ಪೋತುಕಲ್‌ನಲ 40 ಕಿ.ಮೀ ದೂರದಲ್ಲಿ ಮಕ್ಕಳು ಸೇರಿದಂತೆ ಮಹಿಳೆಯರು, ವೃದ್ಧರ ಅನೇಕ ಶವಗಳು ಪತ್ತೆಯಾಗಿವೆ. ಮೃತದೇಹಗಳು ಛಿದ್ರ ಛಿದ್ರವಾಗಿದ್ದು, ಗುರುತು ಇನ್ನೂ ಪತ್ತೆಯಾಗಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಮೇಪ್ಪಾಡಿ ಭಾಗದಲ್ಲಿ ಕಳೆದೆರಡು ದಿನಗಳಿಂದ 200 ಮಿ.ಮೀ ವರೆಗೆ ಭಾರಿ ಮಳೆಯಾಗುತ್ತಿದ್ದು, ಪ್ರವಾಹ ಪೀಡಿತರನ್ನು ಜಿಲ್ಲಾಡಳಿತ ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರ ಮಾಡಿದೆ. 2019ರ ಆಗಸ್ಟ್‌ನಲ್ಲಿ ಮೇಪ್ಪಾಡಿ ಭಾಗದಲ್ಲಿ ಸಂಭವಿಸಿದ ಭೂಕುಸಿತದಲ್ಲಿ 17 ಮಂದಿ ಸಾವಿಗೀಡಾಗಿದ್ದರು.

Share Information
Continue Reading
Advertisement
Click to comment

Leave a Reply

Your email address will not be published. Required fields are marked *