Connect with us

    UDUPI

    ಉಡುಪಿ ಜಿಲ್ಲೆಯ ಸಮುದ್ರ ತೀರದಲ್ಲಿ ನಡೆಯುವ ಸಾವಿನ ಪ್ರಮಾಣ ಶೂನ್ಯಕ್ಕೆ ತರಲು ಸಂಘಟಿತ ಪ್ರಯತ್ನ ಅಗತ್ಯ : ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ

    ಉಡುಪಿ, ಫೆಬ್ರವರಿ 14: ಉಡುಪಿ ಜಿಲ್ಲೆಯ ಕರಾವಳಿ ಪ್ರದೇಶದಲ್ಲಿ ಗರಿಷ್ಠ ಭದ್ರತೆ ಮತ್ತು ಸುರಕ್ಷತಾ ಕ್ರಮಗಳನ್ನು ಕೈಗೊಳ್ಳುವುದರ ಮೂಲಕ ಸಮುದ್ರದಲ್ಲಿ ಸಂಭವಿಸುವ ಸಾವುಗಳನ್ನು ಶೂನ್ಯಕ್ಕೆ ತರುವ ನಿಟ್ಟಿನಲ್ಲಿ, ಕರಾವಳಿ ಕಾವಲು ಪೊಲೀಸ್, ಮೀನುಗಾರಿಕಾ ಇಲಾಖೆ, ಮೀನುಗಾರರು ಮತ್ತು ಎಲ್ಲಾ ಸ್ಥಳೀಯ ಸಂಸ್ಥೆಗಳು ಸಂಘಟಿತವಾಗಿ ಪ್ರಯತ್ನಿಸುವ ಅಗತ್ಯವಿದೆ ಎಂದು ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ತಿಳಿಸಿದರು. ಮಲ್ಪೆಯ ಕರಾವಳಿ ಕಾವಲು ಪೊಲೀಸ್ ಕಚೇರಿಯಲ್ಲಿ ನಡೆದ, ಕರಾವಳಿ ಭದ್ರತಾ ತರಬೇತಿ ಸಂಸ್ಥೆಯ ಉದ್ಘಾಟನೆ ನೆರವೇರಿಸಿ ಮಾತನಾಡಿದರು.

    ಜಿಲ್ಲೆಗೆ ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರು ಆಗಮಿಸುತ್ತಿದ್ದು, ಬೀಚ್‌ಗಳಲ್ಲಿ ಮತ್ತು ಸಮುದ್ರದಲ್ಲಿ ಪ್ರವಾಸಿಗರು ಮತ್ತು ಮೀನುಗಾರಿಕೆಗೆ ತೆರಳುವ ಮೀನುಗಾರರಿಗೆ ಯಾವುದೇ ಅಪಾಯವಾದಲ್ಲಿ ತಕ್ಷಣವೇ ಅವರನ್ನು ರಕ್ಷಿಸಲು ಅಗತ್ಯವಿರುವ ಎಲ್ಲಾ ವಿಧದ ತರಬೇತಿಯನ್ನು ಕರಾವಳಿ ಕಾವಲು ಪೊಲೀಸ್ ಸಿಬ್ಬಂದಿಗೆ ನೀಡುವ ಅಗತ್ಯವಿದೆ ಎಂದು ತಿಳಿಸಿದ ಜಿಲ್ಲಾಧಿಕಾರಿಗಳು, ಜಿಲ್ಲೆಯ ಎಲ್ಲಾ ಬೀಚ್‌ಗಳನ್ನು ಸಮಗ್ರವಾಗಿ ಅಧ್ಯಯನ ಮಾಡಿ ಸಾರ್ವಜನಿಕರು ಮತ್ತು ಸಂಘ ಸಂಸ್ಥೆಗಳ ಸಹಯೋಗದಲ್ಲಿ, ತುರ್ತು ಸಂದರ್ಭಗಳಲ್ಲಿ ಅಲ್ಲಿ ಕೈಗೊಳ್ಳಬೇಕಾದ ಸುರಕ್ಷತಾ ಕ್ರಮಗಳ ಬಗ್ಗೆ ದಾಖಲೀಕರಣ ಮಾಡುವ ಮಾದರಿ ಕಾರ್ಯವಾಗಬೇಕು ಎಂದರು.

     

    ಕರಾವಳಿ ಕಾವಲು ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಬದಲಾದ ಸನ್ನಿವೇಶಗಳಿಗೆ ತಕ್ಕಂತೆ ಅಗತ್ಯ ತಾಂತ್ರಿಕ ತರಬೇತಿಯನ್ನು ನಿರಂತರವಾಗಿ ಪಡೆಯುವ ಮೂಲಕ ಸಮುದ್ರದ ಮೂಲಕ ಎದುರಾಗುವ ಯಾವುದೇ ರೀತಿಯ ಸವಾಲುಗಳನ್ನು ಸಮರ್ಥವಾಗಿ ಎದುರಿಸಲು ಸನ್ನದ್ಧವಾಗಿರಬೇಕು ಎಂದರು.

     

    Share Information
    Advertisement
    Click to comment

    You must be logged in to post a comment Login

    Leave a Reply