LATEST NEWS
ಜಿಲ್ಲಾಧಿಕಾರಿ ಸಂಧಾನ – ಅಂಬ್ಯುಲೆನ್ಸ್ ನಿಂದ ಮೃತದೇಹ ಇಳಿಸಲು ಒಪ್ಪಿಗೆ
ಜಿಲ್ಲಾಧಿಕಾರಿ ಸಂಧಾನ – ಅಂಬ್ಯುಲೆನ್ಸ್ ನಿಂದ ಮೃತದೇಹ ಇಳಿಸಲು ಒಪ್ಪಿಗೆ
ಮಂಗಳೂರು ಜನವರಿ 4: ನಿನ್ನೆ ಹತ್ಯೆಯಾದ ದೀಪಕ್ ಮೃತದೇಹ ಅಂಬ್ಯುಲೆನ್ಸ್ ನಿಂದ ಹೊರ ತೆಗೆಯಲು ನಿರಾಕರಿಸಿ ನಡೆಯುತ್ತಿರುವ ಪ್ರತಿಭಟನೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿಯವರ ಸಂಧಾನ ಯಶಸ್ವಿಯಾಗಿದ್ದು ಮೃತ ದೇಹವನ್ನು ಅಂಬ್ಯುಲೆನ್ಸ್ ನಿಂದ ಇಳಿಸಲು ಹಿಂದೂ ಮುಖಂಡರು ಒಪ್ಪಿಗೆ ಸೂಚಿಸಿದ್ದಾರೆ.
ಕಾಟಿಪಳ್ಳದಲ್ಲಿ ಅಂಬ್ಯುಲೆನ್ಸ್ ನಲ್ಲಿ ದೀಪಕ್ ಶವ ಇಟ್ಟು ಪ್ರತಿಭಟನೆ ನಡೆಸುತ್ತಿದ್ದ ಸ್ಥಳಕ್ಕೆ ದಕ್ಷಿಣಕನ್ನಡ ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ಸರಕಾರದ ಪ್ರತಿನಿಧಿಯಾಗಿ ಆಗಮಿಸಿ ಕುಟುಂಬಕ್ಕೆ ಸಾಂತ್ವಾನ ತಿಳಿಸಿದರು.
ನಂತರ ಮಾತನಾಡಿದ ಅವರು ತಕ್ಷಣದ ಪರಿಹಾರವಾಗಿ ಜಿಲ್ಲಾಡಳಿತದಿಂದ 5 ಲಕ್ಷ ಪರಿಹಾರ ನೀಡಲಾಗುವುದು ಅಲ್ಲದೆ ಹೆಚ್ಚಿನ ಪರಿಹಾರ ದೊರಕಿಸಲು ಸರಕಾರಕ್ಕೆ ಶಿಫಾರಸು ಮಾಡಲಾಗುವುದು ಎಂದು ಹೇಳಿದರು. ಅಲ್ಲದೆ ಕುಟುಂಬಕ್ಕೆ ದೀಪಕ್ ಬಿಟ್ಟು ಬೇರೆ ಆಸರೆಯಿಲ್ಲದ ಹಿನ್ನಲೆಯಲ್ಲಿ ಸಿಎಂ ಪರಿಹಾರ ನಿಧಿಯಿಂದ 5 ಲಕ್ಷ ಮಂಜೂರಾಗಿದೆ ಎಂದು ತಿಳಿಸಿದರು.
ಆದರೆ ಜಿಲ್ಲಾಧಿಕಾರಿ ಮಾತಿಗೆ ಒಪ್ಪದ ಕಾರ್ಯಕರ್ತರು ಮತ್ತೆ ಪ್ರತಿಭಟನೆ ಮುಂದುವರಿಸುವ ಬೆದರಿಕೆ ಒಡ್ಡಿದ್ದರು. ಆದರೆ ಜಿಲ್ಲಾಧಿಕಾರಿಯವರು ಹಿಂದೂ ಸಂಘಟನೆಯ ಮುಖಂಡರೊಂದಿಗೆ ಮಾತುಕತೆ ನಡೆಸಿದ್ದು , ಈಗ ಮೃತ ದೇಹವನ್ನು ಅಂಬ್ಯುಲೆನ್ಸ್ ನಿಂದ ಇಳಿಸಲು ಹಿಂದೂ ಮುಖಂಡರು ಒಪ್ಪಿಗೆ ಸೂಚಿಸಿದ್ದಾರೆ.
ದೀಪಕ್ ಮನೆ ಮುಂದೆ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಗ್ರಾಮಸ್ಥರು ದೀಪಕ್ ಮೃತದೇಹದ ಅಂತಿಮ ದರ್ಶನ ಪಡೆಯುತ್ತಿದ್ದಾರೆ. ಶಿವಾಜಿ ಕ್ಷತ್ರಿಯ ಸಂಪ್ರದಾಯದಂತೆ ಅಂತ್ಯ ಸಂಸ್ಕಾರ ನಡೆಯಲಿದೆ.
ಜನತಾ ಕಾಲೋನಿಯ ಹಿಂದೂ ರುದ್ರಭೂಮಿಯಲ್ಲಿ ಅಂತ್ಯ ಸಂಸ್ಕಾರದ ವಿಧಿ ವಿಧಾನಗಳು ನೆರವೇರಲಿದೆ. ಅಂತ್ಯಕ್ರಿಯೆಗೂ ಮುನ್ನ ನಿವಾಸದಿಂದ ಗಣೇಶಪುರದವರೆಗೆ ಶವಯಾತ್ರೆ ಮಾಡಲು ನಿರ್ಧರಿಸಲಾಗಿದೆ