LATEST NEWS
ದೀಪಕ್ ರಾವ್ ಹತ್ಯೆ ಖಂಡಿಸಿ ಸಂಸತ್ ಭವನದ ಎದುರು ಬಿಜೆಪಿ ಪ್ರತಿಭಟನೆ
ದೀಪಕ್ ರಾವ್ ಹತ್ಯೆ ಖಂಡಿಸಿ ಸಂಸತ್ ಭವನದ ಎದುರು ಬಿಜೆಪಿ ಪ್ರತಿಭಟನೆ
ನವದೆಹಲಿ ಜನವರಿ 4: ಮಂಗಳೂರಿನಲ್ಲಿ ನಡೆದ ದೀಪಕ್ ರಾವ್ ಹತ್ಯೆ ಖಂಡಿಸಿ ಬಿಜೆಪಿ ಸಂಸತ್ ಭವನದ ಎದುರಿನಲ್ಲಿ ಪ್ರತಿಭಟನೆ ನಡೆಸಿತು. ದೀಪಕ್ ರಾವ್ ಹತ್ಯೆಗೆ ರಾಜ್ಯ ಕಾಂಗ್ರೆಸ್ ಸರ್ಕಾರವೇ ಕಾರಣವೆಂದು ಬಿಜೆಪಿ ಆರೋಪಿಸಿ, ಇಂದು ಸಂಸತ್ ಭವನದ ಮುಂದಿರುವ ಗಾಂಧಿ ಪ್ರತಿಮೆ ಎದುರು ಬಿಜೆಪಿ ಸಂಸದರು ಪ್ರತಿಭಟನೆ ಮೂಲಕ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕರ್ನಾಟಕದ ಕಾಂಗ್ರೆಸ್ ಸರ್ಕಾರ ಹಿಂದೂಗಳ ವಿರೋಧಿ ಎಂದೂ ಬಿಜೆಪಿ ಸಂಸದರು ಆರೋಪಿಸಿದ್ದಾರೆ.
ಕರ್ನಾಟಕದಲ್ಲಿ ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ಕುಮ್ಮಕ್ಕಿನಿಂದಲೇ ಹಿಂದೂ ಸಂಘಟನೆಗಳ ಕಾರ್ಯಕರ್ತರ ಹತ್ಯೆ ನಡೆಯುತ್ತಿವೆ. ದೀಪಕ್ ರಾವ್ ಹತ್ಯೆ ಪ್ರಕರಣ ಸೇರಿದಂತೆ ಎಲ್ಲಾ ಪ್ರಕರಣಗಳನ್ನು ಸಿಬಿಐ ಅಥವಾ ಎನ್‌ಐಎ ತನಿಖೆಗೆ ನೀಡಬೇಕೆಂದು ಸಂಸದ ಪ್ರಹ್ಲಾದ್ ಜೋಶಿ ಒತ್ತಾಯಿಸಿದ್ದಾರೆ.
ಪಿಎಫ್‌ಐ ಸಂಘಟನೆ ವಿರುದ್ಧ ರಾಜ್ಯ ಸರ್ಕಾರ ಮೃದು ದೋರಣೆ ತಳೆದಿದೆ. ಇದರಿಂದ ರಾಜ್ಯ ಕಾನೂನು ವ್ಯವಸ್ಥೆ ಸಂಪೂರ್ಣವಾಗಿ ಹದಗೆಟ್ಟಿದೆ ಎಂದು ಸಂಸದೆ ಶೋಭಾ ಕರಂದ್ಲಾಜೆ ದೂರಿದರು.