LATEST NEWS
ಲಾಕ್ ಡೌನ್ ನಿಂದಾಗಿ ಖರ್ಚಿಗೆ ಹಣ ಇಲ್ಲ ಎಂದು ಗಂಡನ ಮನೆಯಲ್ಲಿ ಕಳ್ಳತನ ಮಾಡಿದ ನಟಿ
ಚೆನ್ನೈ: ಲಾಕ್ ಡೌನ್ ನಿಂದಾಗಿ ಕೆಲಸವಿಲ್ಲದ ಕಾರಣ ಹಣ ಇಲ್ಲ ಎಂದು ತಮಿಳು ದಾರಾವಾಹಿ ನಟಿಯೊಬ್ಬಳು ತನ್ನ ಗಂಡನ ಮನೆಯಲ್ಲೇ ಕಳ್ಳತನ ಮಾಡಿ ಪರಾರಿಯಾಗಿದ್ದಾರೆ ಎಂದು ಆರೋಪ ಕೇಳಿ ಬಂದಿದೆ.
ತಮಿಳು ಕಿರುತೆರೆಯ ಖ್ಯಾತ ನಟಿ ಸುಚಿತ್ರಾ ಮತ್ತು ಆಕೆಯ ಪತಿ ತಮ್ಮ ಸ್ವಂತ ಮನೆಯಲ್ಲಿಯೇ ಕಳ್ಳತನ ಮಾಡಿದ್ದಾರೆ ಎಂದು ಸುದ್ದಿಯಾಗಿದೆ.
ತಮಿಳು ದಾರಾವಾಹಿಗಳಲ್ಲಿ ನಟಿಸುತ್ತಿರುವ ನಟಿ ಸುಚಿತ್ರಾ ಕೊರೊನಾ ಹಿನ್ನೆಲೆಯಲ್ಲಿ ಲಾಕ್‍ಡೌನ್ ಆಗಿದ್ದ ಸಂದರ್ಭದಲ್ಲಿ ಮಣಿಕಂಠನ್ ಎಂಬಾತನ ಜೊತೆ ಮದುವೆಯಾಗಿದ್ದಳು. ನಂತರ ನವದಂಪತಿ ಮಣಿಕಂಠನ್ ಮನೆಗೆ ಹೋಗಿದ್ದಾರೆ. ಅಲ್ಲಿ ಪೋಷಕರು ಮೊದಲಿಗೆ ಅವರ ಮದುವೆಯನ್ನು ಒಪ್ಪಿಕೊಂಡಿರಲಿಲ್ಲ. ನಂತರ ಎಲ್ಲರೂ ಒಪ್ಪಿಕೊಂಡು ಇಬ್ಬರನ್ನೂ ಮನೆಗೆ ಸೇರಿಸಿಕೊಂಡಿದ್ದಾರೆ.
ಸುಚಿತ್ರಾ ಪತಿಯ ಮನೆಯಲ್ಲಿರುವ ಹಣ ಮತ್ತು ಆಭರಣಗಳನ್ನು ನೋಡಿ ಇಷ್ಟಪಟ್ಟಿದ್ದಳು. ಕೊರೊನಾದಿಂದ ಕೆಲಸವಿಲ್ಲದೇ ಇಬ್ಬರಿಗೂ ಹಣದ ಸಮಸ್ಯೆ ಎದುರಾಗಿದೆ. ಮನೆಯಲ್ಲಿ ಕೇಳಿದರೂ ಕೊಡುವುದಿಲ್ಲ ಎಂದು ಈ ಜೋಡಿ ಮಾಸ್ಟರ್ ಪ್ಲಾನ್ ಮಾಡಿದೆ. ಕೊನೆಗೆ ಮನೆಯಲ್ಲಿರುವ ಹಣ, ಒಡವೆಯನ್ನು ದೋಚಲೂ ಇಬ್ಬರು ನಿರ್ಧರಿಸಿದ್ದರು ಎಂದು ವರದಿಯಾಗಿದೆ.
ಅದರಂತೆಯೇ ನನಗೆ ಕೆಲಸ ಇದೆ ಎಂದು ನಟಿ ಸುಚಿತ್ರಾ ಚೆನ್ನೈನಿಂದ ಹೋಗಿದ್ದಾಳೆ. ಇತ್ತ ಕಳ್ಳತನ ಮಾಡಲೂ ಪತಿ ಮಣಿಕಂಠನ್ ಮನೆಯಲ್ಲಿಯೇ ಉಳಿದುಕೊಂಡಿದ್ದನು. ನಂತರ ಮನೆಯಲ್ಲಿದ್ದ ಹಣ, ಚಿನ್ನಾಭರಣ ದೋಚಿಕೊಂಡು ಪರಾರಿಯಾಗಿದ್ದಾನೆ. ಮನೆಯಲ್ಲಿ ಕಳ್ಳತನವಾದ ವಿಚಾರ ತಿಳಿದು ಮಣಿಕಂಠನ್ ಮನೆಯವರು ಪೊಲೀಸರಿಗೆ ದೂರು ನೀಡಿದ್ದಾರೆ. ತನಿಖೆ ಮಾಡಿದ ಪೊಲೀಸರಿಗೆ ಮನೆಯವರೇ ಕದ್ದಿರುವ ವಿಚಾರ ತಿಳಿದಿದೆ. ತಕ್ಷಣ ಮಣಿಕಂಠನ್ ನನ್ನು ಪೊಲೀಸರು ಬಂಧಿಸಿದ್ದಾರೆ. ಪೊಲೀಸರ ಬಳಿ ಮಣಿಕಂದನ್ ಕಳ್ಳತನ ಮಾಡಿರುವುದಾಗಿ ತಪ್ಪೊಪ್ಪಿಕೊಂಡಿದ್ದಾನೆ. ಆದರೆ ಸುಚಿತ್ರಾ ನಾಪತ್ತೆಯಾಗಿದ್ದಾಳೆ.
Facebook Comments
You may like
-
ಸಂದರ್ಶನದಲ್ಲಿ ಮಹಿಳಾ ಅಧಿಕಾರಿಗೆ ಖಾಸಗಿ ಅಂಗ ಪ್ರದರ್ಶಿಸಿದ ಐಟಿ ಉದ್ಯೋಗಾಕಾಂಕ್ಷಿ..!
-
ಕುಂದಾಪುರದಲ್ಲಿ ಬೈಕ್ ಕಳ್ಳರಿಗೆ ಸಾರ್ವಜನಿಕರಿಂದ ಬಿತ್ತು ಗೂಸಾ…!
-
ಬಂಗಾರ್ ಪಲ್ಕೆಯ ಜಲಪಾತದ ಗುಡ್ಡ ಕುಸಿದು ಓರ್ವ ಮೃತ್ಯು
-
ಕೋಳಿ ಕಳ್ಳರಿದ್ದಾರೆ ಎಚ್ಚರಿಕೆ!!! ಭಿಕ್ಷುಕರ ನೆಪದಲ್ಲಿ ಬಂದು, ಮನೆಯಲ್ಲಿ ಯಾರು ಇಲ್ಲದ ವೇಳೆ ಕೋಳಿ ಕದಿಯುವ ಕಳ್ಳರನ್ನು ನೋಡಿದಿರಾ?
-
ಕಡಬ ಹೆದ್ದಾರಿಯಲ್ಲಿ ಭೀಕರ ಅಪಘಾತ; ಒಂದು ಬಲಿ..
-
ಮಹಿಳೆಯನ್ನು ಚುಡಾಯಿಸಿದ ವ್ಯಕ್ತಿಗೆ ಸಾರ್ವಜನಿಕರಿಂದ ಥಳಿತ; ಬಿದ್ದ ಏಟಿಗೆ ಸ್ಥಳದಲ್ಲೆ ಸಾವು
You must be logged in to post a comment Login