ಹೊಸದಿಲ್ಲಿ ನವೆಂಬರ್ 14: ದೆಹಲಿಯ ಕೆಂಪು ಕೋಟೆ ಬಳಿ ಸ್ಫೋಟಗೊಂಡ ಕಾರು ಚಲಾಯಿಸಿದ್ದ ಉಗ್ರ ಡಾ.ಉಮರ್ ನಬಿಯ ಮನೆಯನ್ನು ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾ ಜಿಲ್ಲೆಯಲ್ಲಿ ಭದ್ರತಾ ಪಡೆಗಳು ನೆಲಸಮಗೊಳಿಸಿವೆ. ಗುರುವಾರ ಮತ್ತು ಶುಕ್ರವಾರದ ಮಧ್ಯರಾತ್ರಿಯಲ್ಲಿ ಈ ಕಾರ್ಯಾಚರಣೆ ನಡೆಸಲಾಯಿತು ಎಂದು ಎಂದು ಅಧಿಕಾರಿಗಳು ಇಂದು (ಶುಕ್ರವಾರ) ಮಾಹಿತಿ ನೀಡಿದ್ದಾರೆ.


ಕೆಂಪು ಕೋಟೆ ಬಳಿ ನಡೆದ ಕಾರು ಸ್ಫೋಟದಲ್ಲಿ 13 ಜನರು ಮೃತಪಟ್ಟಿದ್ದರು. 20ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದರು. ಈ ಕುರಿತ ತನಿಖೆಯ ಭಾಗವಾಗಿ ಸುಧಾರಿತ ಸ್ಫೋಟಕ ಸಾಧನವನ್ನು ಬಳಸಿ ಡಾ. ಉಮರ್ ಮನೆಯನ್ನು ಧ್ವಂಸ ಮಾಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Read This – ಉಳ್ಳಾಲ – ರಕ್ತಸಿಕ್ತ ಸ್ಥಿತಿಯಲ್ಲಿ ವ್ಯಕ್ತಿಯ ಮೃತದೇಹ ಪತ್ತೆ – ಬೀದಿ ನಾಯಿ ದಾಳಿ ಶಂಕೆ

ಸ್ಫೋಟಕ್ಕೆ ಬಳಸಿದ ಹುಂಡೈ i20 ಕಾರು ಕಾಶ್ಮೀರದ ವೈದ್ಯ ಡಾ. ಉಮರ್‌ಗೆ ಸಂಬಂಧಿಸಿದ್ದಾಗಿದೆ ಎಂದು ಅಧಿಕಾರಿಗಳು ಶಂಕಿಸಿದ್ದಾರೆ. ದಾಳಿಯಲ್ಲಿ ಉಮರ್‌ ಪಾತ್ರದ ಬಗ್ಗೆ ತನಿಖೆ ನಡೆಯುತ್ತಿದೆ. ಜಮ್ಮು ಮತ್ತು ಕಾಶ್ಮೀರ ಪೊಲೀಸರು ಶೋಧ ಕಾರ್ಯಾಚರಣೆಗಳನ್ನು ನಡೆಸಿ ಡಾ. ಉಮರ್ ಕುಟುಂಬದ ಮೂವರು ಸದಸ್ಯರು ಸೇರಿದಂತೆ ಆರು ಜನರನ್ನು ಈಗಾಗಲೇ ಬಂಧಿಸಿದ್ದಾರೆ.

Share Information