Connect with us

    LATEST NEWS

    ಇ.ಡಿ ಅಧಿಕಾರಿಗಳಿಂದ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್‌ ಬಂಧನ!

    ನವದೆಹಲಿ, ಮಾರ್ಚ್ 21:ದೆಹಲಿ ಮುಖ್ಯಮಂತ್ರಿ ಹಾಗೂ ಆಮ್‌ ಆದ್ಮಿ ಪಕ್ಷದ (ಎಎಪಿ) ಮುಖ್ಯಸ್ಥ ಅರವಿಂದ ಕೇಜ್ರಿವಾಲ್‌ ಅವರನ್ನು ದೆಹಲಿ ಅಬಕಾರಿ ನೀತಿ ಹಗರಣದ ಜೊತೆ ನಂಟಿರುವ ಹಣ ಅಕ್ರಮ ವರ್ಗಾವಣೆ ಆರೋಪದಲ್ಲಿ ಜಾರಿ ನಿರ್ದೇಶನಾಲಯದ (ಇ.ಡಿ) ಅಧಿಕಾರಿಗಳು ಗುರುವಾರ ರಾತ್ರಿ ಬಂಧಿಸಿದ್ದಾರೆ.

    ಕೇಜ್ರಿವಾಲ್‌ ಅವರು, ಸ್ವಾತಂತ್ರ್ಯ ನಂತರದಲ್ಲಿ ಬಂಧನಕ್ಕೆ ಒಳಗಾದ ಮೊದಲ ಹಾಲಿ ಮುಖ್ಯಮಂತ್ರಿ ಎನಿಸಿದ್ದಾರೆ. ಈ ಪ್ರಕರಣದಲ್ಲಿ, ತಮ್ಮ ವಿರುದ್ಧ ಯಾವುದೇ ಬಲವಂತದ ಕ್ರಮ ಕೈಗೊಳ್ಳದಂತೆ ಸೂಚಿಸಬೇಕು ಎಂದು ಕೋರಿ ಕೇಜ್ರಿವಾಲ್‌ ಅರ್ಜಿ ಸಲ್ಲಿಸಿದ್ದರು. ವಿಚಾರಣೆ ನಡೆಸಿದ್ದ ದೆಹಲಿ ಹೈಕೋರ್ಟ್‌, ಈ ಹಂತದಲ್ಲಿ ಬಲವಂತದ ಕ್ರಮದಿಂದ ರಕ್ಷಣೆ ನೀಡಲು ಗುರುವಾರ ನಿರಾಕರಿಸಿತು.

    ‘ಹೈಕೋರ್ಟ್‌ ಆದೇಶ ಹೊರಬಿದ್ದ ಬೆನ್ನಲ್ಲೇ, ಕೇಜ್ರಿವಾಲ್‌ ಅವರ ನಿವಾಸಕ್ಕೆ ತೆರಳಿದ ಇ.ಡಿ ತಂಡ, ಶೋಧ ನಡೆಸಿತು. ನಂತರ ಕೇಜ್ರಿವಾಲ್‌ ಅವರನ್ನು ಬಂಧಿಸಿತು’ ಎಂದು ಅಧಿಕಾರಿಗಳು ಹೇಳಿದ್ದಾರೆ. ‘ಕೇಜ್ರಿವಾಲ್ ಅವರನ್ನು ಶುಕ್ರವಾರ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗುವುದು. ಹೆಚ್ಚಿನ ವಿಚಾರಣೆ ನಡೆಸುವುದಕ್ಕಾಗಿ ಅವರನ್ನು ತನ್ನ ವಶಕ್ಕೆ ನೀಡುವಂತೆ ನ್ಯಾಯಾಲಯವನ್ನು ಕೋರಲಾಗುವುದು’ ಎಂದೂ ಅಧಿಕಾರಿಗಳು ತಿಳಿಸಿದ್ದಾರೆ.

    ಪ್ರಕರಣಕ್ಕೆ ಸಂಬಂಧಿಸಿ ವಿಚಾರಣೆಗೆ ಹಾಜರಾಗುವಂತೆ ಜಾರಿ ನಿರ್ದೇಶನಾಲಯವು ಕೇಜ್ರಿವಾಲ್‌ ಅವರಿಗೆ ಎಂಟು ಬಾರಿ ಸಮನ್ಸ್‌ ಜಾರಿಗೊಳಿಸಿತ್ತು.

    Share Information
    Advertisement
    Click to comment

    You must be logged in to post a comment Login

    Leave a Reply